ಚಿಕ್ಕಬಳ್ಳಾಪುರ, ಏಪ್ರಿಲ್ ,23,2025 (www.justkannada.in): ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿಯೊಬ್ಬರು ಗುಂಡಿನ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶಕುಮಾರ್ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡು ತಗುಲಿ ಚಿಕನ್ ರವಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಲ್ಲು ಕ್ವಾರಿ ಕ್ರಷರ್ ಗೆ ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದರು. ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶಕುಮಾರ್ ಪ್ರತಿಭಟಿಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಗುಂಡಿನ ದಾಳಿಯಿಂದ ಗಾಯಗೊಂಡ ರವಿ ಎಂಬುವವರನ್ನ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Key words: Former MLC, relative, fires, protesters
The post ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಫೈರಿಂಗ್ ಮಾಡಿದ ಮಾಜಿ ಎಂಎಲ್ಸಿ ಸಂಬಂಧಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.