30
July, 2025

A News 365Times Venture

30
Wednesday
July, 2025

A News 365Times Venture

ಫಲಪುಷ್ಪ ಪ್ರದರ್ಶನ ಹಾಗೂ ಮಧುರ ವಸ್ತ್ರೋತ್ಸವ: ಸಚಿವರಿಂದ ಚಾಲನೆ

Date:

ಮಂಡ್ಯ,ಜನವರಿ,24,2025 (www.justkannada.in): ನಗರದ ತೋಟಗಾರಿಕೆ ಕಚೇರಿ ಆವರಣದಲ್ಲಿ ಇಂದಿನಿಂದ 5 ದಿನಗಳ ಹಮ್ಮಿಕೊಂಡಿರುವ  ಫಲಪುಷ್ಪ ಪ್ರದರ್ಶನ ಹಾಗೂ ಜವಳಿ ಇಲಾಖೆ ವತಿಯಿಂದ ಆಯೋಜಿಸಿರುವ ʻಮಧುರ ವಸ್ತ್ರೋತ್ಸವʻವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ  ಎನ್.ಚಲುವರಾಯಸ್ವಾಮಿ ಅವರು ಇಂದು ಚಾಲನೆ ನೀಡಿದರು.

ಉದ್ಯಾನವನದಲ್ಲಿ ಆಕರ್ಷಕ ಬಣ್ಣದ ನಾನಾ ಜಾತಿಯ ಹೂಗಳಿಂದ ಹಲವಾರು ಕಲಾಕೃತಿಗಳು ಅರಳಿ ನಿಂತಿದ್ದು, ಜನರನ್ನು ಕೈ ಬೀಸಿ ಕರೆಯುತ್ತಿದೆ. ಸೆಲ್ಫಿ ಪಾಯಿಂಟ್ ಗಳಲ್ಲಿ ಎಲ್ಲರೂ ಫೋಟೋ ತೆಗೆದುಕೊಳ್ಳುತ್ತಿದ್ದದ್ದು, ವಿಶೇಷವಾಗಿತ್ತು.

9 ಲಕ್ಷ ವಿವಿಧ ಬಣ್ಣದ ಸೇವಂತಿಗೆ ಮತ್ತು ಗುಲಾಬಿ ಹೂವುಗಳಿಂದ ಪ್ರವಾಸಿ ತಾಣ, ದೇವಾಲಯಗಳ ನಿರ್ಮಾಣವಾಗಿದ್ದು, ವಿಶೇಷವಾಗಿತ್ತು. ವಿವಿಧ ಹೂ ಅಲಂಕಾರಿಕ ಕುಂಡಗಳ ಜೋಡಣೆ, ವಿವಿಧ ತರಕಾರಿ ಬೆಳೆಗಳು ಹಾಗೂ ಪೌಷ್ಠಿಕ ಕೈತೋಟ ಮಾದರಿ ಹಾಗೂ ತರಕಾರಿ ಕೆತ್ತನೆ ಪ್ರದರ್ಶನ ಮತ್ತು ಜಿಲ್ಲೆಯ ತೋಟಗಾರಿಕೆ ಬೆಳೆಗಳ ವೈವಿದ್ಯತೆಯ ಮಾದರಿಗಳ ಪ್ರದರ್ಶನ ಹಾಗೂ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಮತ್ತು ವಿವಿಧ ಅಭಿವೃದ್ಧಿ ಇಲಾಖೆಗಳ ಕಾರ್ಯಕ್ರಮಗಳ ಸಮಗ್ರ ಮಾಹಿತಿ ಇಲ್ಲಿ ದೊರೆಯಲಿದೆ.

ಪ್ರತಿ ದಿನ ಬೆಳಗ್ಗೆ 10ರಿಂದ ರಾತ್ರಿ 10 ಗಂಟೆಯವರೆಗೆ ಅವಕಾಶ

ಪ್ರತಿ ದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ದಿನ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಯಸ್ಕರಿಗೆ ಟಿಕೆಟ್ ದರ 30, 6-12 ವರ್ಷದ ಮಕ್ಕಳಿಗೆ 20 ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ಮಕ್ಕಳ ಗುಂಪುಗಳಿಗೆ ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಪ್ರವೇಶ ಉಚಿತವಾಗಿದೆ.

ಪ್ರಮುಖ ಆಕರ್ಷಣೆಗಳಿವು

ಫಲಪುಷ್ಪ ಪ್ರದರ್ಶನದಲ್ಲಿ 9 ಲಕ್ಷ ವಿವಿಧ ಬಣ್ಣದ ಸೇವಂತಿಗೆ ಮತ್ತು ವಿವಿಧ ಬಣ್ಣದ ಗುಲಾಬಿ ಹೂವುಗಳನ್ನು ಬಳಸಿ ಪ್ರಸಿದ್ದ ದೇವಾಲಯ ಹಾಗೂ ಪ್ರಸಿದ್ದ ಪ್ರವಾಸಿ ತಾಣಗಳನ್ನು ನಿರ್ಮಿಸಲಾಗಿದೆ.

ಯುವ ಜನತೆಯನ್ನು ಸೆಳೆಯಲು ಹತ್ತು ವಿವಿಧ ಕಡೆಗಳಲ್ಲಿ ಸೆಲ್ಫಿ ಪಾಯಿಂಟ್, ಹೂವಿನ ಆಕೃತಿಯ ಕ್ಷಯ ರೋಗ ಕುರಿತು ಜಾಗೃತಿ, ನರೇಗಾ ಯೋಜನೆಯ ಮಾಹಿತಿಯೊನ್ನೊಳಗೊಂಡ ಸ್ಥಬ್ಥಚಿತ್ರ, ವಿವಿಧ ಆಕರ್ಷಕ ಬಗೆಯ ಅಡಿನಿಯಂ ಗಿಡಗಳ ಪ್ರದರ್ಶಿಕೆ, ಬೋನ್ಸಾಯ್ ಗಿಡಗಳ ಪ್ರದರ್ಶಿಕೆ, ವಿವಿಧ ತರಕಾರಿ ಹಣ್ಣುಗಳನ್ನು ಬಳಸಿ ಕಲಾಕೃತಿಗಳ ಕೆತ್ತನೆ ಹಾಗೂ ಇಕೆಬನಾ ಜೋಡಣೆ ಎಲ್ಲರನ್ನೂ ಆಕರ್ಷಿಸಲಿವೆ.

35 ಸಾವಿರಕ್ಕೂ ಹೆಚ್ಚು 40 ಬಗೆಯ ವಿವಿಧ ಜಾತಿಯ ಹೂವುಗಳ ಅಲಂಕಾರಿಕ ಕುಂಡಗಳ ಜೋಡಣೆ, 1.50 ಲಕ್ಷ ವಿವಿಧ ಜಾತಿಯ ಅಲಂಕಾರಿಕ ಗಿಡಗಳಾದ ಪೆಟೊನಿಯಾ, ಸಾಲ್ವಿಯಾ, ಅಂಟಿರೈನಂ, ಸೆಲೋಶಿಯಾ, ಮಾರಿಗೋಲ್ಡ್, ಜೀನಿಯಾ, ಸೇವಂತಿಗೆ, ಪಾಯ್ನಿಸೆಟಿಯಾಗಳು.

ವಿವಿಧ ಜಿಲ್ಲೆಗಳ ಕೈಮಗ್ಗ, ನೇಕಾರರ ಸಹಕಾರ ಸಂಘಗಳು ಭಾಗವಹಿಸಿವೆ. ಕೈ ಮಗ್ಗ ನೇಕಾರರಿಂದ ತಯಾರಿಸಿರುವ ಹತ್ತಿ, ರೇಷ್ಮೆ, ಮೊಳಕಾಲ್ಮೂರು ರೇಷ್ಮೆ ಸೀರೆ, ಚಿಂತಾಮಣಿ ರೇಷ್ಮೆ ಸೀರೆ, ಕಾಟನ್ ಸೀರೆ, ಪಂಚೆ, ಬೆಡ್‌ಶೀಟ್, ಟವಲ್, ಲುಂಗಿ ಹಾಗೂ ಇತರೆ ಕೈ ಮಗ್ಗ ಉತ್ಪನ್ನಗಳನ್ನು ಶೇ.20 ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಕೃಷಿ ಇಲಾಖೆ, ಮೀನುಗಾರಿಕೆ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಪಶು ಸಂಗೋಪನೆ ಇಲಾಖೆ, ಆರೋಗ್ಯ ಇಲಾಖೆ, ಕೈಗಾರಿಕೆ ಮತ್ತು ಖಾದಿ ಮತ್ತು ಗ್ರಾಮೋದ್ಯೋಗ ವತಿಯಿಂದ ಕಲಾಕೃತಿಗಳನ್ನು ಹಾಗೂ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಶಾಸಕ ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ.ಕುಮಾರ್, ಸಿಇಒ ಶೇಖ್ ತನ್ವೀರ್ ಅಸಿಫ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ನಗರ ಸಭೆಯ ಅಧ್ಯಕ್ಷ ನಾಗೇಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ  ರೂಪಶ್ರೀ, ಕೈಮಗ್ಗ ಇಲಾಖೆ ಉಪನಿರ್ದೇಶಕ  ರಂಗಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು.

Key words: Minister, Chaluvarayaswamy, inaugurates, flower exhibition

The post ಫಲಪುಷ್ಪ ಪ್ರದರ್ಶನ ಹಾಗೂ ಮಧುರ ವಸ್ತ್ರೋತ್ಸವ: ಸಚಿವರಿಂದ ಚಾಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...

ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...