31
March, 2026

A News 365Times Venture

31
Tuesday
March, 2026

A News 365Times Venture

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ -ಸಿಎಂ ಸಿದ್ದರಾಮಯ್ಯ

Date:

ಬಾಗಲಕೋಟೆ, ಮಾರ್ಚ್,31,2026 (www.justkannada.in):  ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ  ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉಪಚುನಾವಣೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾತಾವರಣ ಪೂರಕವಾಗಿದೆ.  ದಿ. ಹೆಚ್.ವೈ.ಮೇಟಿಯವರು ಬಾಗಲಕೋಟೆಯ ಅಭಿವೃದ್ಧಿಗೆ ಶ್ರಮವಹಿಸಿದ್ದರು. ಮೇಟಿಯವರು ಎಲ್ಲ ವರ್ಗದವರ ಏಳಿಗೆಗಾಗಿ ಸೇವೆ ಸಲ್ಲಿಸಿದ ಅಜಾತಶತ್ರುವಾಗಿದ್ದರು. ಸರಳ, ಸಜ್ಜನ ಮೇಟಿಯವರ ಅವರ ನಿಧನದಿಂದ ಖಾಲಿಯಾಗಿರುವ ಶಾಸಕ ಸ್ಥಾನಕ್ಕೆ ಅವರ ಮಗನೇ ಆದ ಉಮೇಶ್ ಮೇಟಿಯವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಬಾಗಲಕೋಟೆಯಲ್ಲಿ ಅವರ ಗೆಲ್ಲುವ ವಿಶ್ವಾಸವಿದೆ ಎಂದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನವರೇ ಆಗಿದ್ದ ಪೈಲ್ವಾನ್ ಸಾದಿಕ್ ಅವರ ಮನವೊಲಿಸಿ ಕಣದಿಂದ ಹಿಂದೆ ಸರಿಯುವಂತೆ ಮಾಡಲಾಗಿದೆ.  ಸಚಿವ ಜಮೀರ್ ಅಹ್ಮದ್ ಅವರೂ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಬಿಜೆಪಿಯವರು ಸೋಲಿನ ಭೀತಿಯಲ್ಲಿದ್ದಾರೆ

ಸೋಲಿನ ಭಯದಿಂದ ಸಿಎಂ ಅವರು ಬಾಗಲಕೋಟೆಯಲ್ಲಿ ಹೆಚ್ಚಿನ ಪ್ರಚಾರ ಕೈಗೊಂಡಿದ್ದಾರೆ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಸೋಲಿನ ಭೀತಿಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ.  ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ಪ್ರತೀತಿಯಾಗಿದ್ದು, ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡಲಾಗಿದೆ ಎಂದರು.

ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ

ಸಿಎಂ ಸ್ಥಾನದ ಬಗ್ಗೆ  ಬಿಜೆಪಿಯ ಛಲವಾದಿ ನಾರಾಯಣಸ್ವಾಮಿಯವರು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಪಕ್ಷದ ಹೈಕಮಾಂಡ್ ನ ನಿರ್ಧಾರಗಳಿಗೆ ಬದ್ಧನಾಗಿರುತ್ತೇನೆ. ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಬಿಜೆಪಿ ಅವಧಿಯಲ್ಲಿ ಬಾಗಲಕೋಟೆ ಅಭಿವೃದ್ಧಿಯಾಗಿಲ್ಲ

ಬಿಜೆಪಿಯವರು ತಮ್ಮ ಅವಧಿಯಲ್ಲಿ ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಲೀ, ಕೃಷ್ಣಾ ಮೇಲ್ದಂಡೆ ಯೋಜನೆಯಡಿ ರೈತರಿಗೆ ಪರಿಹಾರ ನೀಡಲು ಆದ್ಯತೆ ನೀಡಲಿಲ್ಲ. ಬಾಗಲಕೋಟೆಯ ಅಭಿವೃದ್ಧಿಗೆ ಹೆಚ್.ವೈ.ಮೇಟಿಯವರ ಕೊಡುಗೆ ಅನನ್ಯವಾಗಿದೆ ಎಂದರು.

Key words: Public, support, Bagalkot By-election, CM Siddaramaiah

The post ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ -ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSOU: ಏ.2 ರಂದು IAS, KAS ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಬಿರ ಸಮಾರೋಪ ಸಮಾರಂಭ ಮತ್ತು ಪುಸ್ತಕ ಬಿಡುಗಡೆ

ಮೈಸೂರು,ಮಾರ್ಚ್,31,2026 (www.justkannda.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ...

ಪೊಲೀಸರ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ವಿದೇಶಿ ಪ್ರಜೆ ಬಂಧನ

ಬೆಂಗಳೂರು,ಮಾರ್ಚ್,31,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ವಿರುದ್ದ ಪೊಲೀಸರ...

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್ ಮಾಡಿದ್ದಾರೆ- ಡಿಸಿಎಂ ಡಿಕೆಶಿ ಟೀಕೆ

ಬೆಂಗಳೂರು,ಮಾರ್ಚ್,31,2026 (www.justkannada.in):  ಗ್ಯಾಸ್ ಸಿಲಿಂಡರ್ ಸಿಗದ ಹೋಟೆಲ್ ನವರು ಪರದಾಡುತ್ತಿದ್ದಾರೆ. ಕೇಂದ್ರ...

6 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ

ಹುಬ್ಬಳ್ಳಿ,ಮಾರ್ಚ್,30,2026 (www.justkannada.in):  6 ಲಕ್ಷ ರೂ.ಲಂಚ ಸ್ವೀಕರಿಸುವಾಗ ಕಮರ್ಷಿಯಲ್ ಟ್ಯಾಕ್ಸ್ ಡಿಸಿಯೊಬ್ಬರು...