ಬಾಗಲಕೋಟೆ,ಮೇ,4,2026 (www.justkannada.in): ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರು ಭರ್ಜರಿ ಜಯ ಸಾಧಿಸಿದ್ದಾರೆ.
ಬಿಜೆಪಿಯ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ವಿರುದ್ಧ 22,867 ಮತಗಳ ಅಂತರದಿಂದ ಗೆದ್ದಿದ್ದಾರೆ. ಈ ಗೆಲುವಿನ ಮೂಲಕ ಈ ಕ್ಷೇತ್ರವನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮತಎಣಿಕೆ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದರು. ಅಂತಿಮವಾಗಿ 22,867 ಮತಗಳ ಅಂತರದಿಂದ ಗೆದ್ದಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರಿಗೆ 97,941 ಮತಗಳು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ 76,075 ಮತಗಳು ಲಭಿಸಿವೆ.
Key words: Bagalkot, by-election, congress candidate, Umesh Meti wins
The post ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




