11
March, 2026

A News 365Times Venture

11
Wednesday
March, 2026

A News 365Times Venture

ಬಾಲಿವುಡ್​ ಹಿರಿಯ ನಟ ದೇಬ್ ಮುಖರ್ಜಿ ನಿಧನ

Date:

ಮುಂಬೈ,ಮಾರ್ಚ್,14,2025 (www.justkannada.in): ಬಾಲಿವುಡ್ ಹಿರಿಯ ನಟ ದೇಬ್ ಮುಖರ್ಜಿ ಅವರು ಇಂದು  ನಿಧನ ಹೊಂದಿದ್ದಾರೆ.

ಬಾಲಿವುಡ್​ನ ಖ್ಯಾತ ಯುವ ನಿರ್ದೇಶಕ ಅಯಾನ್ ಮುಖರ್ಜಿಯ ತಂದೆ ದೇಬ್ ಮುಖರ್ಜಿ ಕೊನೆಯುಸಿರೆಳೆದಿದ್ದಾರೆ. ದೇಬ್ ಮುಖರ್ಜಿ ಅವರಿಗೆ 83 ವರ್ಷ ವಯಸ್ಸಾಗಿತ್ತು. 1965 ರಿಂದಲೂ ಸಿನಿಮಾಗಳಲ್ಲಿ ತೊಡಗಿಕೊಂಡಿರುವ ದೇಬ್ ಮುಖರ್ಜಿ ನಟನೆಯ ಜೊತೆಗೆ ನಿರ್ಮಾಣದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. ನೂರಾರು ಸಿನಿಮಾಗಳಲ್ಲಿ ನಟಿಸದಿದ್ದರೂ ಸಹ ನಟಿಸಿದ ಕಡಿಮೆ ಸಿನಿಮಾಗಳಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ

ದೇಬ್ ಮುಖರ್ಜಿ, ಬಾಲಿವುಡ್​ ನ ಕಲ್ಟ್ ಕ್ಲಾಸಿಕ್ ಸಿನಿಮಾಗಳಾದ ‘ಅಭಿನೇತ್ರಿ’, ‘ಏಕ್ ಬಾರ್ ಮುಸ್ಕುರಾದೊ’, ‘ಆಸೂ ಬನ್​ ಗಯೇ ಪೂಲ್’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. 2009 ರಲ್ಲಿ ಬಿಡುಗಡೆ ಆದ ಶಾಹಿದ್ ಕಪೂರ್ ನಟನೆಯ ‘ಕಮೀನೆ’ ಅವರ ಕೊನೆಯ ಸಿನಿಮಾ. ಅದಾದ ಬಳಿಕ ಅವರು ಸಿನಿಮಾ ರಂಗದಿಂದ ದೂರವೇ ಉಳಿದಿದ್ದರು.

Key words: Veteran ,Bollywood, actor, Deb Mukherjee, passes away

The post ಬಾಲಿವುಡ್​ ಹಿರಿಯ ನಟ ದೇಬ್ ಮುಖರ್ಜಿ ನಿಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ- ಎಂ.ಬಿ ಪಾಟೀಲ್ ಅಸಮಾಧಾನ

ಬೆಂಗಳೂರು,ಮಾರ್ಚ್,11,2026 (www.justkannada.in):  ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ...

ಆ್ಯಸಿಡ್ ಸಂತ್ರಸ್ತರಿಗೆ 50 ಸಾವಿರ ರೂ. ಭತ್ಯೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

ಬೆಂಗಳೂರು,ಮಾರ್ಚ್,11,2026 (www.justkannada.in): ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಜೀವನ ನಿರ್ವಹಣೆಗಾಗಿ 50 ಸಾವಿರ...

LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು ಗ್ಯಾಸ್...

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ...