22
August, 2026

A News 365Times Venture

22
Saturday
August, 2026

A News 365Times Venture

ಬಿಜೆಪಿಗೆ ಪ್ರಜಾತಾಂತ್ರಿಕ ವ್ಯವಸ್ಥೆಯ ಮೇಲೆ ಗೌರವವಿಲ್ಲ: ಸಚಿವ ಮಧು ಬಂಗಾರಪ್ಪ ಕಿಡಿ

Date:

ಬೆಂಗಳೂರು, ಆಗಸ್ಟ್,21,2026 (www.justkannada.in): ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಬಿಜೆಪಿಗೆ ಎಳ್ಳಷ್ಟೂ ಆಸಕ್ತಿ ಇಲ್ಲ. ಹೀಗಾಗಿ ಸದನದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸುವ ಮೂಲಕ  ಜನವಿರೋಧಿಯಾಗಿ ವರ್ತಿಸುತ್ತಿದೆ  ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ (ಕೆಪಿಸಿಸಿ) ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಇಂದು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಸಚಿವ ಮಧು ಬಂಗಾರಪ್ಪ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಮಹತ್ವದ ವಿಚಾರಗಳ ಕುರಿತು ಸದನದಲ್ಲಿ ಸಮಗ್ರ ಚರ್ಚೆ ನಡೆಯಬೇಕು. ಆದರೆ, ಬಿಜೆಪಿ ಸದಸ್ಯರು ಉದ್ದೇಶಪೂರ್ವಕವಾಗಿ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದು, ಜನರ ಸಮಸ್ಯೆಗಳು ಹಾಗೂ ಅಭಿವೃದ್ಧಿಯ ವಿಚಾರಗಳು ಚರ್ಚೆಯಾಗದಂತೆ ಮಾಡುತ್ತಿದ್ದಾರೆ. ಬಿಜೆಪಿಯ ಈ ನಡೆಯಿಂದ ಆ ಪಕ್ಷಕ್ಕೆ ಪ್ರಜಾತಾಂತ್ರಿಕ ವ್ಯವಸ್ಥೆಯ ಮೇಲೆ ಗೌರವವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಜನರ ಸಮಸ್ಯೆಗಳಿಗಿಂತ ಬಿಜೆಪಿಗೆ ತನ್ನ ಪ್ರತಿಷ್ಠೆಯೇ ಹೆಚ್ಚಾಗಿ ಎಂದು ಸಚಿವ ಮಧು ಬಂಗಾರಪ್ಪ ದೂರಿದರು.

ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ರಾಜ್ಯದ ಅಭಿವೃದ್ಧಿಗೆ ಅಗತ್ಯವಾದ ನೀತಿ-ನಿರ್ಧಾರಗಳನ್ನು ರೂಪಿಸಲು ವಿಧಾನಮಂಡಲದ ಕಲಾಪ ಅತ್ಯಂತ ಮಹತ್ವದ್ದಾಗಿದೆ. ಆದರೆ, ಪ್ರತಿಪಕ್ಷವು ರಚನಾತ್ಮಕ ಚರ್ಚೆಗೆ ಮುಂದಾಗದೆ ಸದನದ ಕಲಾಪವನ್ನು ಅಡ್ಡಿಪಡಿಸುವುದನ್ನೇ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ಯಾವುದೇ ವಿಷಯದ ಕುರಿತು ಚರ್ಚಿಸಲು ನಾವು ಸಿದ್ಧರಿದ್ದೇವೆ ಎಂದರೂ ಅವಕಾಶ ನೀಡದೆ, ಸದನದ ಘನತೆಗೆ ಧಕ್ಕೆ ತರುವ ಕೆಲಸವನ್ನು ಮಾಡುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ  ಎಂದರು.

ರಾಜ್ಯದ ಅಭಿವೃದ್ಧಿ, ಶಿಕ್ಷಣ, ರೈತರು, ಯುವಜನರು ಹಾಗೂ ಜನಸಾಮಾನ್ಯರ ಬದುಕಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ. ಪ್ರತಿಪಕ್ಷವೂ ಸಹ ಜವಾಬ್ದಾರಿಯುತವಾಗಿ ನಡೆದುಕೊಂಡು ಸದನದ ಸಮಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

Key words: BJP, no respect, democratic system, Minister, Madhu Bangarappa

The post ಬಿಜೆಪಿಗೆ ಪ್ರಜಾತಾಂತ್ರಿಕ ವ್ಯವಸ್ಥೆಯ ಮೇಲೆ ಗೌರವವಿಲ್ಲ: ಸಚಿವ ಮಧು ಬಂಗಾರಪ್ಪ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿಗೆ ಉತ್ತಮ ವಿಮಾನ ಸಂಪರ್ಕ, ನಿಲ್ದಾಣ ವಿಸ್ತರಣೆಗೆ ವೇಗ ನೀಡಿ –ಸಂಸದ ಯದುವೀರ್ ಒತ್ತಾಯ

ಮೈಸೂರು, ಆಗಸ್ಟ್,21, 2026 (www.justkannada.in): ಮೈಸೂರಿನ ವಿಮಾನ ಸಂಪರ್ಕವನ್ನು ಮತ್ತಷ್ಟು ಬಲಪಡಿಸಿ,...

ವರ ಮಹಾಲಕ್ಷ್ಮಿ ಪೂಜೆಯಲ್ಲಿ ಭಾಗಿಯಾಗಿ ಸೌಹಾರ್ದತೆ ಸಂದೇಶ ಸಾರಿದ ಮುಸ್ಲೀಂ ಬಾಂಧವರು

ಮೈಸೂರು,ಆಗಸ್ಟ್,21,2026 (www.justkannada.in): ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಲಕ್ಷ್ಮಿಪುರಂನಲ್ಲಿರುವ ಶ್ರೀ ದುರ್ಗಾ ಫೌಂಡೇಶನ್...

ಸರ್ಕಾರದ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನ ನೀಡಿ: ಸಿಎಂ ಡಿ.ಕೆ ಶಿವಕುಮಾರ್ ಕರೆ

ಬೆಂಗಳೂರು, ಆಗಸ್ಟ್,21,2026 (www.justkannada.in):  ಹಣಕಾಸಿನ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ಹಾಗೂ ಆದಾಯ...

ಡಿಕೆಶಿ ಭ್ರಷ್ಟರನ್ನು ರಕ್ಷಣೆ ಮಾಡುತ್ತಿರುವುದು ನಾಚಿಕೆಗೇಡು- ಸಂಸದ ಶೆಟ್ಟರ್

ಧಾರವಾಡ,ಆಗಸ್ಟ್,21,2026 (www.justkannada.in):  ಬಿ.ನಾಗೇಂದ್ರಗೆ ಮಂತ್ರಿಗಿರಿ ಕೊಡುವ ಅವಶ್ಯಕತೆ ಏನಿತ್ತು? ಸಿಎಂ ಡಿಕೆ...