ದಾವಣಗೆರೆ,ಜುಲೈ,8,2025 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು ಹೋಗಿದ್ದರು. ಆದರೆ ಮತ್ತೆ ಯಾಕೆ ಬಿಜೆಪಿಗೆ ಬಂದರು ಗೊತ್ತಿಲ್ಲ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಅಸಮಾಧಾನ ವ್ಯಕ್ತಪಡಿಸಿದರು.
ದಾವಣಗೆರೆಯಲ್ಲಿ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಜನ್ಮದಿನ ಕಾರ್ಯಕ್ರಮದಲ್ಲಿ ಬಿಜೆಪಿಯ ರೆಬಲ್ಸ್ ಟೀಮ್ ನಾಯಕರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅರವಿಂದ ಲಿಂಬಾವಳಿ ಅವರು, ಯಡಿಯೂರಪ್ಪ ಪಕ್ಷ ಬಿಟ್ಟು ಹೋಗಿದ್ದರು.ಅವರು ಮತ್ತೆ ಯಾಕೆ ಬಂದರೋ ಗೊತ್ತಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮನೆ ಕದವನ್ನ ತಟ್ಟುತ್ತಿದ್ದರು. ಇದನ್ನು ತಡೆದು, ಮತ್ತೆ ಬಿಎಸ್ ವೈರನ್ನ ಮುಖ್ಯಮಂತ್ರಿ ಮಾಡಿದ್ದು ಸಿದ್ದೇಶ್ವರ ಅವರು. ಶಿಕಾರಿಪುರದಲ್ಲಿ ಗೆಲುವು ಸಾಧಿಸಲು ಸಿದ್ದೇಶ್ವರ್ ಅವರೇ ಕಾರಣ ಎಂದರು.
ಅನಂತಕುಮಾರ್ ಅವರೊಂದಿಗೆ ಸಮಸ್ಯೆ ಎದುರಾದಾಗ ನಾವು ಸಂಪರ್ಕ ಮಾಡುತ್ತಿದ್ದದ್ದು ಸಿದ್ದೇಶ್ವರ ಅವರನ್ನೇ. ಅವರ ಮೂಲಕ ಮಾತನಾಡಿಸಿ ರಾಜ್ಯ ಮಟ್ಟದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದೇವೆ. ಆದರೆ ಜತೆಗೆ ನಿಂತ ಸ್ನೇಹಿತನನ್ನು ಯಡಿಯೂರಪ್ಪ ನಡೆಸಿಕೊಳ್ಳುತ್ತಿರುವ ರೀತಿ ಬಗ್ಗೆ ಬೇಸರವಿದೆ ಎಂದು ಅರವಿಂದ ಲಿಂಬಾವಳಿ ಕಿಡಿಕಾರಿದರು.
Key words: BJP, BSY, Aravind Limbavali, Davanagere
The post ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.