29
April, 2026

A News 365Times Venture

29
Wednesday
April, 2026

A News 365Times Venture

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

Date:

ಬೆಂಗಳೂರು,ಏಪ್ರಿಲ್,29,2026 (www.justkannada.in):  ಬಿಸಿಲಿನ ತಾಪದಿಂದ ಬಸವಳಿದಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆಗೆ ವರುಣ ತನ್ನ ಕೃಪೆ ತೋರಿದ್ದಾನೆ. ನಗರದಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು  ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಪ್ರಮುಖ ರಸ್ತೆಗಳು ನದಿಗಳಂತಾಗಿ ಮಾರ್ಪಟ್ಟಿವೆ. ನಗರದ ವಿಧಾನಸೌಧ, ಮೆಜೆಸ್ಟಿಕ್  ಶಾಂತಿನಗರ,  ಕೋರಮಂಗಲ ರಾಜಾಜಿನಗರ, ಜೆಪಿ ನಗರ,ಮಲ್ಲೇಶ್ವರಂ, ಜಯನಗರ ಸೇರಿ ಹಲವು ಕಡೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ.

ಭಾರಿ ಮಳೆಯಿಂದಾಗಿ ಮರಬಿದ್ದು ಶೇಷಾದ್ರಿಪುರಂನ ನಾಗಪ್ಪ ರಸ್ತೆ ಬಂದ್ ಆಗಿದೆ.  ಸತತವಾಗಿ ಸುರಿಯುತ್ತಿರುವ  ಮಳೆಯಂದಾಗಿ ವಿಧಾನಸೌಧದ ಆವರಣಕ್ಕೂ ನೀರು ನುಗ್ಗಿದೆ. ಆಲಿಕಲ್ಲುಗಳು ಸಹ ವಿಧಾನಸೌಧದ ಗೋಡೆಗಳಿಗೆ ಅಪ್ಪಳಿಸಿದೆ.  ಭದ್ರತಾ ಸಿಬ್ಬಂದಿ ಹಾಗೂ ಅಲ್ಲಿಗೆ ಆಗಮಿಸುವ ಜನಪ್ರತಿನಿಧಿಗಳು, ಅಧಿಕಾರಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ವೈಟ್‌ ಫೀಲ್ಡ್‌, ಸಿಲ್ಕ್ ಬೋರ್ಡ್, ಟಿನ್ ಫ್ಯಾಕ್ಟರಿ, ಕೋರಮಂಗಲ, ಇಂದಿರಾನಗರ, ಮೆಜೆಸ್ಟಿಕ್, ಶಾಂತಿ ನಗರ ಮತ್ತು ಕೆ.ಆರ್. ವೃತ್ತದಂತಹ ಪ್ರದೇಶಗಳಲ್ಲಿ ಮಳೆ ನೀರು ರಸ್ತೆಯಲ್ಲೇ ನಿಂತು ವಾಹನ ಸವಾರರು ಪರದಾಡುವಂತಾಗಿದೆ.

Key words: Heavy rains, Bengaluru, traffic

The post ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವೈದ್ಯರ ಸಲಹಾ ಚೀಟಿ ಇಲ್ಲದೆ ಎಚ್, ಎಚ್ 1ಮತ್ತು ಎಕ್ಸ್ ಅಡಿ ಬರುವ ಔಷಧಿ ಮಾರಾಟ ಕಂಡು ಬಂದರೆ ಕ್ರಮ: ಡಿಸಿ ಲಕ್ಷ್ಮಿಕಾಂತ ರೆಡ್ಡಿ

ಮೈಸೂರು, ಏಪ್ರಿಲ್,29,2026 (www.justkannada.in):  ಔಷಧ ಮಾರಾಟ ಅಂಗಡಿಗಳು ಔಷಧ ಮತ್ತು ಕಾಂತಿವರ್ಧಕ...

ಖರ್ಗೆ ಸಿಎಂ ಆದ್ರೆ ಸ್ವಾಗತ ಎಂಬ ಹೇಳಿಕೆ: MLC ಯತೀಂದ್ರ ಪ್ರತಿಕ್ರಿಯಿಸಿದ್ದು ಹೀಗೆ?

ರಾಯಚೂರು,ಏಪ್ರಿಲ್,29,2026 (www.justkannada.in):  ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಸಂತೋಷ ಸ್ವಾಗತಿಸುತ್ತೇವೆ ಎಂಬ...

ಮಲ್ಲಿಕಾರ್ಜುನ ಖರ್ಗೆ ಸಿಎಂ ಆದ್ರೆ ಸಂತೋಷ, ಸ್ವಾಗತ ಮಾಡ್ತೇವೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾದರೆ ಸಂತೋಷ. ಸ್ವಾಗತ...

ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದ ಯದುವೀರ್ ಆಗ್ರಹ

ಮೈಸೂರು, ಏಪ್ರಿಲ್,29,2026 (www.justkannada.in):  ತಂಬಾಕು ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು, ಹರಾಜು...