ಬೆಂಗಳೂರು, ಫೆಬ್ರವರಿ 27,2025 (www.justkannada.in): ಬೆಂಗಳೂರಿನ ಇಡ್ಲಿ ಪ್ರಿಯರಿಗೆ ಆಹಾರ ಇಲಾಖೆ ಶಾಕಿಂಗ್ ಸುದ್ದಿಯೊಂದನ್ನ ನೀಡಿದೆ. ಬೆಂಗಳೂರಿನ ಅನೇಕ ಹೋಟೆಲ್‌ಗಳಲ್ಲಿ ತಯಾರಾಗುವ ಇಡ್ಲಿ ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗದಿಂದ ದೃಢಪಟ್ಟಿದೆ.
ಹೌದು ಬೆಂಗಳೂರಿನ ವಿವಿಧೆಡೆಗಳಿಂದ ಇಡ್ಲಿ ಮಾದರಿಗಳನ್ನು ಪಡೆದಿದ್ದ ಆಹಾರ ಇಲಾಖೆ ಅವುಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿದ್ದು, ಇದೀಗ ಪ್ರಯೋಗಾಲಯ ವರದಿಯಲ್ಲಿ 35 ಕ್ಕೂ ಹೆಚ್ಚು ಇಡ್ಲಿ ಮಾದರಿಗಳು ಅಸುರಕ್ಷಿತ ಎಂಬ ಶಾಕಿಂಗ್ ವಿಚಾರ ಬಹಿರಂಗವಾಗಿದೆ.
ಬೆಂಗಳೂರಿನ ಹಲವಡೆ ಇತ್ತೀಚೆಗೆ ಇಡ್ಲಿ ತಯಾರಿಸಲು ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್ ಬಳಕೆ ಮಾಡಲಾಗುತ್ತಿದೆ. ಇಡ್ಲಿ ಮಾಡುವಾಗ ಮಾತ್ರವಲ್ಲದೆ ಆಹಾರವನ್ನು ಬಡಿಸುವಾಗ ಮತ್ತು ಪ್ಯಾಕ್ ಮಾಡುವಾಗಲೂ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಹಾಳೆಯು ಶಾಖಕ್ಕೆ ಒಡ್ಡಿಕೊಂಡು ಹಾನಿಕಾರಕ ವಸ್ತುವನ್ನು ಹೊರಸೂಸುತ್ತಿದೆ. ಇದು ಕ್ಯಾನ್ಸರ್ ಕಾರಕವಾಗಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು.
ತಜ್ಞರ ಎಚ್ಚರಿಕೆ ಬೆನ್ನಲ್ಲೇ ಆಹಾರ ಇಲಾಖೆ ಬೆಂಗಳೂರಿನ ಹಲವಡೆಯಿಂದ ಇಡ್ಲಿ ಮಾದರಿಗಳನ್ನು ಸಂಗ್ರಹ ಮಾಡಿತ್ತು. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಹೋಟೆಲ್ ಹಾಗೂ ತಿಂಡಿಗಳ ಅಂಗಡಿಗಳಿಂದ 500ಕ್ಕೂ ಹೆಚ್ಚು ಇಡ್ಲಿ ಸ್ಯಾಂಪಲ್ಸ್ ಸಂಗ್ರಹ ಮಾಡಿದ್ದು, ಇವುಗಳಲ್ಲಿ 35 ಕ್ಕೂ ಹೆಚ್ಚು ಇಡ್ಲಿ ಸ್ಯಾಂಪಲ್ಸ್ ಅಸುರಕ್ಷಿತ ಎಂಬ ವರದಿ ಬಂದಿದೆ. ಇನ್ನೂ ನೂರಾರು ಇಡ್ಲಿ ಸ್ಯಾಂಪಲ್ಸ್ ವರದಿಗೆ ಕಾಯಲಾಗುತ್ತಿದೆ. ಹೀಗಾಗಿ ಇನ್ಮುಂದೆ ಇಡ್ಲಿ ಸೇವಿಸುವ ಗ್ರಾಹಕರು ಎಚ್ಚರ ವಹಿಸಬೇಕಾಗುತ್ತದೆ.
Key words: Idli, Bengaluru, Shocking news, Food Department, test
The post ಬೆಂಗಳೂರಿನ ಇಡ್ಲಿ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಆಹಾರ ಇಲಾಖೆ ಪರೀಕ್ಷೆಯಲ್ಲಿ ಆಘಾತಕಾರಿ ಅಂಶ ಬಹಿರಂಗ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




