5
March, 2026

A News 365Times Venture

5
Thursday
March, 2026

A News 365Times Venture

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

Date:

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು ಬೆಂಗಳೂರು ಸೇರಿದಮತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಬೆಂಗಳೂರು, ಯಾದಗಿರಿ ಬಾಗಲಕೋಟೆ, ಧಾರವಾಡ, ಹಾಸನ, ವಿಜಯಪುರ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ನಗರದಲ್ಲಿ ವೆಟರ್ನರಿ ಕಾಲೇಜು ಹೆಬ್ಬಾಳದ ಅಸಿಸ್ಟೆಂಟ್ ಪ್ರೊಫೆಸರ್ ಇಂದರೇಶ್ ಹಾಗೂ ಸಿಂಗನಾಯಕನಹಳ್ಳಿ ಕೋ-ಆಪರೇಟಿವ್ ಸೊಸೈಟಿಯ ಸಿಇಒ ಶಶಿಧರ್ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಯಾದಗಿರಿಯಲ್ಲಿ ಎಲೆಕ್ಟ್ರಿಕಲ್ ಇಲಾಖೆ ಡೆಪ್ಯುಟಿ ಎಲೆಕ್ಟ್ರಿಕಲ್ ಇನ್ಸ್‌ ಪೆಕ್ಟರ್ ವಿರೇಶ್ ಹಿರೇಮಠ್ ಅವರ  ಮನೆ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಹಾಸನ ಮಹಾನಗರ ಪಾಲಿಕೆಯ ಎಇಇ ಎಂ.ಸಿ. ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು  ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ.

ಬೆಂಗಳೂರು ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಅವರ ಮನೆಗಳ ಜೊತೆಗೆ ಬಾಗಲಕೋಟೆಯ ಪೋಸ್ಟಲ್ ಕಾಲೋನಿಯಲ್ಲಿರುವ ಅವರ ಸಹೋದರ ಭೀಮಸಿಂಗ್ ನಾಯಕ್ ಅವರ ಮನೆ ಮೇಲೂ ದಾಳಿ ನಡೆದಿದೆ. ಭೀಮಸಿಂಗ್ ನಾಯಕ್ ಅವರು ಬಾಗಲಕೋಟೆ ಡಿಎಆರ್‌ನಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದು, ಬಾಗಲಕೋಟೆ ತಾಲೂಕಿನ ಬಿಲ್ ಕೆರೂರು ಗ್ರಾಮದಲ್ಲಿರುವ ಅವರ ಮೂಲ ನಿವಾಸದಲ್ಲಿಯೂ ಪರಿಶೀಲನೆ ನಡೆಸಲಾಗಿದೆ.

ಮಂಡ್ಯದಲ್ಲಿ ಸಾರ್ವಜನಿಕ ಕಾಮಗಾರಿಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್. ಸತೀಶ್ ಅವರ ಮನೆ ಮತ್ತು ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಧಾರವಾಡದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಎಂ.ಕೆ. ಸುರಕೋಡ ಅವರ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Key words: Lokayukta, raids, inspections, state

The post ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್...

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...