ಚಾಮರಾಜನಗರ,ಆಗಸ್ಟ್,15,2025 (www.justkannada.in): ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಾಳಿಬೆಟ್ಟ ಕ್ರಾಸ್ ನಲ್ಲಿ ನಡೆದಿದೆ.
ಬೆಂಗಳೂರು ಮೂಲದ ಪ್ರದೀಪ್ (20) ಹಾಗೂ ಭವೀಶ್ (21) ಮೃತಪಟ್ಟವರು. ಮೃತ ಯುವಕರು ಬೆಂಗಳೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ರಾಂಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
Key words: Two youths, die , government bus, collides , bike, Chamarajanagar
The post ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿ: ಇಬ್ಬರು ಯುವಕರು ದುರ್ಮರಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.