ಬೆಂಗಳೂರು,ಮೇ,2,2026 (www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಸಿದಂತೆ ಇಬ್ಬರು ಅಧಿಕಾರಿಗಳ ತಲೆದಂಡವಾಗಿದೆ.
ಕರ್ತವ್ಯ ಲೋಪದ ಆರೋಪದ ಮೇಲೆ ಶಿವಾಜಿನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ (EE) ಮೊಹಮ್ಮದ್ ಜಾವೇದ್ ಹಾಗೂ ವಸಂತನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ರುದ್ರಮುನಿ ಅವರನ್ನು ಅಮಾನತು ಮಾಡಿ ಜಿಬಿಎ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ಎರಡು ದಿನಗಳ ಹಿಂದೆ ಸುರಿದ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆಯ ಹಳೆಯ ಕಾಂಪೌಂಡ್ ಗೋಡೆ ದಿಢೀರನೆ ಕುಸಿದು ಬಿದ್ದು ಏಳು ಮಂದಿ ಸಾವನ್ನಪ್ಪಿದ್ದರು. ಪಾಲಿಕೆಯ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂಬ ಟೀಕೆಗಳು ವ್ಯಕ್ತವಾಗಿದ್ದವು. ಇದೀಗ ಇಬ್ಬರು ಅಧಿಕಾರಿಗಳನ್ನ ಅಮಾನತು ಮಾಡಲಾಗಿದೆ.
Key words: Bowring Hospital, compound, tragedy, Two officials, suspended
The post ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ದುರಂತ: ಇಬ್ಬರು ಅಧಿಕಾರಿಗಳು ಸಸ್ಪೆಂಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




