ಬೆಂಗಳೂರು,ಏಪ್ರಿಲ್,10,2026 (www.justkannada.in): ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಮೃತಪಟ್ಟಿದ್ದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ ದುಃಖವಾಯಿತು.
ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಹಾಗೆಯೇ ಘಟನೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿ, ಮಾಹಿತಿ ಪಡೆದಿದ್ದೇನೆ. ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಈ ಘಟನೆಯಲ್ಲಿ ಬಲಿಯಾಗಿದ್ದು, ಮಾನವೀಯ ನೆಲೆಯಲ್ಲಿ ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
Key words: Three workers, die, landslide, CM, announces, compensation
The post ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವು: 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




