8
March, 2026

A News 365Times Venture

8
Sunday
March, 2026

A News 365Times Venture

ಮಲೇ ಮಹದೇಶ್ವರ ಬೆಟ್ಟದಲ್ಲಿ 3 ದಿನ ಭಕ್ತರ ವಾಸ್ತವ್ಯಕ್ಕೆ ನಿರ್ಬಂಧ

Date:

ಚಾಮರಾಜನಗರ,ಏಪ್ರಿಲ್,21,2025 (www.justkannada.in): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ  ಏಪ್ರಿಲ್ 24 ರಂದು ಕರ್ನಾಟಕ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮಲೇ ಮಹದೇಶ್ವರ ಬೆಟ್ಟದಲ್ಲಿ 3 ದಿನ ಭಕ್ತರ ವಾಸ್ತವ್ಯಕ್ಕೆ ನಿರ್ಬಂಧ ವಿಧಿಸಲಾಗಿದೆ.

ಏಪ್ರಿಲ್ 22 ರಿಂದ ಏಪ್ರಿಲ್ 24 ರ ವರೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ವಾಸ್ತವ್ಯಕ್ಕೆ ನಿಷೇಧ ಹೇರಲಾಗಿದೆ. ಈ ಕುರಿತು ಮಲೆ ಮಹದೇಶ್ವರ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಭಕ್ತರಲ್ಲಿ ಗೊಂದಲ ಮೂಡದೆ ಇರಲಿ ಎಂದು ಮುಂಚಿತವಾಗಿಯೇ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

ಸಚಿವ ಸಂಪುಟ ಸಭೆ ಹಿನ್ನಲೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳಿಗೆ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಮೂರು ದಿನಗಳ ಕಾಲ ಭಕ್ತರ ವಾಸ್ತವ್ಯಕ್ಕೆ ನಿರ್ಬಂಧ ವಿಧಿಸಲಾಗಿದೆ.  ಭಕ್ತರು ಸಹಕಾರ ನೀಡಬೇಕು ಎಂದು ಕಾರ್ಯದರ್ಶಿ ರಘು ಮನವಿ ಮಾಡಿದ್ದಾರೆ.

ಹಿಂದೆ ಹಲವು ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ದಿನಾಂಕ ನಿಗದಿಯಾಗಿತ್ತು. ಆದರೆ ಪ್ರತಿ ಬಾರಿಯೂ ಕೊನೆ ಕ್ಷಣದಲ್ಲಿ ಅಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ರದ್ದಾಗುತ್ತಿತ್ತು. ಇದೀಗ ಏ.24ಕ್ಕೆ  ಸಚಿವ ಸಂಪುಟ ಸಭೆ ನಿಗದಿಯಾಗಿದೆ.

Key words: Restriction, devotees, stay, Male Mahadeshwara hill, 3 days

The post ಮಲೇ ಮಹದೇಶ್ವರ ಬೆಟ್ಟದಲ್ಲಿ 3 ದಿನ ಭಕ್ತರ ವಾಸ್ತವ್ಯಕ್ಕೆ ನಿರ್ಬಂಧ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಾಲ ಮಾಡದೆ ಅಭಿವೃದ್ಧಿ ಆಗಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in):  ಸಾಲದ ಬಗ್ಗೆ ಬಿಜೆಪಿಯವರು ಟೀಕೆ ಹಿನ್ನೆಲೆಯಲ್ಲಿ ಈ ಕುರಿತು...

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು...

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ...

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ...