27
June, 2026

A News 365Times Venture

27
Saturday
June, 2026

A News 365Times Venture

ಮಲ್ಲಿಕಾರ್ಜುನ ಖರ್ಗೆ ಬಳಿ ಕೂಡಲೇ ಕ್ಷಮೆ ಕೇಳಿ: ಅಸ್ಸಾಂ ಸಿಎಂಗೆ ಡಿಸಿಎಂ ಡಿಕೆಶಿ ಆಗ್ರಹ

Date:

ಬೆಂಗಳೂರು,ಏಪ್ರಿಲ್,8,2026 (www.justkannada.in): ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ನೀಡುವ ಅವಹೇಳನಕಾರಿ ಹೇಳಿಕೆ ಖಂಡನೀಯ. ಕೂಡಲೇ ಕ್ಷಮೆಯಾಚಿಸಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ  ಅವಹೇಳನಕಾರಿ ಹೇಳಿಕೆ ತೀವ್ರವಾಗಿ ಖಂಡಿಸುತ್ತೇನೆ.  ದಶಕಗಳ ಕಾಲ ಸಾರ್ವಜನಿಕ ಜೀವನಕ್ಕೆ ಸಮರ್ಪಿಸಿಕೊಂಡ ನಾಯಕ  ಮಲ್ಲಿಕಾರ್ಜುನ ಖರ್ಗೆ.  ಎಐಸಿಸಿ ಅಧ್ಯಕ್ಷರಾಗಿ ಜವಾಬ್ದಾರಿ ಸ್ಥಾನದಲ್ಲಿದ್ದಾರೆ ಈ ಸ್ಥಾನವನ್ನು ಒಮ್ಮೆ ಮಹಾತ್ಮ ಗಾಂಧೀಜಿ ವಹಿಸಿದ್ದರು.

ಗೌರವಾನ್ವಿತ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಈ ರೀತಿ ಭಾಷೆ ಬಳಕೆ ಖಂಡನೀಯ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮ ತಕ್ಷಣ  ಕ್ಷಮೆಯಾಚಿಸಲಿ ಎಂದು  ಡಿಸಿಎಂ ಡಿಕೆ ಶಿವಕುಮಾರ್  ಒತ್ತಾಯಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಟೀಕಿಸಿದ್ದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮ  ಅವರು, ಖರ್ಗೆ ಹುಚ್ಚರಂತೆ ಮಾತನಾಡುತ್ತಿದ್ದಾರೆ ಎಂದಿದ್ದರು ಎನ್ನಲಾಗಿದೆ.

Key words: DCM, DK Shivakumar, Assam CM, iapologize, Mallikarjun Kharge

The post ಮಲ್ಲಿಕಾರ್ಜುನ ಖರ್ಗೆ ಬಳಿ ಕೂಡಲೇ ಕ್ಷಮೆ ಕೇಳಿ: ಅಸ್ಸಾಂ ಸಿಎಂಗೆ ಡಿಸಿಎಂ ಡಿಕೆಶಿ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಈ ಬಾರಿ ಮೈಸೂರು ದಸರಾದಲ್ಲಿ ವಿಜೃಂಭಣೆಯಿಂದ ಕಂಬಳ ನಡೆಸುತ್ತೇವೆ- ಶಾಸಕ ಅಶೋಕ್ ರೈ

ಮೈಸೂರು,ಜೂನ್,26,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿಎಂ ಡಿಕೆ ಶಿವಕುಮಾರ್...

ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,26,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಗೊಂದಲ ಇರುವುದು ನಿಜ....

ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ

ತುಮಕೂರು,ಜೂನ್,26,2026 (www.justkannada.in):  ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಮಲಹೊರುವ...

ಅಯೋಧ್ಯೆ ರಾಮಮಂದಿರ ಕಾಣಿಕೆ ದುರುಪಯೋಗ: ಇಬ್ಬರು ಅರೆಸ್ಟ್

ನವದೆಹಲಿ,ಜೂನ್,26,2026 (www.justkannada.in): ಅಯೋಧ್ಯೆಯ ರಾಮಮಂದಿರದ ಕಾಣಿಕೆ ದುರುಪಯೋಗ ಪ್ರಕರಣದ ತನಿಖೆ ಚುರುಕುಗೊಂಡಿದ್ದು,...