ದಾವಣಗೆರೆ,ಜೂನ್,9,2026 (www.justkannada.in): ತಂಪು ಪಾನೀಯದಲ್ಲಿ ಮತ್ತು ಬರುವ ಔಷಧಿ ನೀಡಿ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ 10 ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ದಾವಣಗೆರೆ ಜಿಲ್ಲೆ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ಪೊಲೀಸರು 10 ಮಂದಿ ಆರೋಪಿಗಳನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ.
ಸಂತ್ರಸ್ತ ಮಹಿಳೆಯು ಜೂನ್ 3 ರಂದು ತನ್ನ ಗಂಡನ ಜೊತೆ ಜಗಳವಾಡಿಕೊಂಡು ಮನೆಯಿಂದ ತವರು ಮನೆಗೆ ಹೊರಟಿದ್ದ ವೇಳೆ ದಾರಿ ಮಧ್ಯೆ ದುಷ್ಕರ್ಮಿಗಳು ಮಹಿಳೆಯನ್ನ ಅಡ್ಡ ಹಾಕಿದ್ದಾರೆ. ನಂತರ ಮಹಿಳೆಗೆ ಮತ್ತು ಬರುವ ಔಷಧ ಹಾಕಿ ಕೊಟ್ಟ ತಂಪು ಪಾನೀಯ ಕುಡಿಸಿ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ನೀಡಿರುವ ದೂರಿನಲ್ಲಿ ಉಲ್ಲೇಖವಾಗಿದೆ.
ಬಳಿಕ ಮಹಿಳೆಯ ಫೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು ಸಂತ್ರಸ್ತೆಯು ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಎಸ್ಪಿ ಶೇಖರ್ ಹೆಚ್ ಟಿ ಸೇರಿದಂತೆ ಹಿರಿಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: Woman, gang rape, accused, 10 arrested
The post ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ; 10 ಮಂದಿ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




