22
May, 2026

A News 365Times Venture

22
Friday
May, 2026

A News 365Times Venture

ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ ಹಾಸಿಗೆ-ಕೆ.ವಿ.ಪ್ರಭಾಕರ್

Date:

ಬೆಂಗಳೂರು,ಮೇ,22,2026 (www.justkannada.in): ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ ಹಾಸಿಗೆ ಇದ್ದ ಹಾಗೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ “ಮಾಧ್ಯಮ-ಸಂವಾದ”ದಲ್ಲಿ ಕೆ.ವಿ ಪ್ರಭಾಕರ್  ಮಾತನಾಡಿದರು.

ಮಾಧ್ಯಮ ಸಲಹೆಗಾರ ಹುದ್ದೆ ಪ್ರತೀ ದಿನ ಸವಾಲಿನದ್ದು. ಬೆಳಗ್ಗೆ ಎದ್ದು ಪತ್ರಿಕೆಗಳನ್ನು ತಿರುವಿ ಹಾಕುವವರೆಗೂ ನನಗೆ ದುಗುಡ ಇದ್ದೇ ಇರುತ್ತದೆ. ಈ ಸವಾಲುಗಳನ್ನು ಪ್ರತೀ ದಿನ ನಿರ್ವಹಿಸುತ್ತಿದ್ದೇನೆ ಎನ್ನುವ ಸಮಾಧಾನ ಕೂಡ ಇದೆ. ಆದರೆ, ನನಗೆ ಒದಗಿ ಬಂದಿರುವ ಹೊಣೆಗಾರಿಕೆ ಬಗ್ಗೆ ನನಗೆ ಯಾವತ್ತೂ ಭ್ರಮ ನಿರಸನ ಆಗಿಲ್ಲ ಎಂದರು.

ಸಿಎಂ ಯಾವತ್ತೂ ಹೇಳಿಲ್ಲ

ಇವತ್ತಿನವರೆಗೂ ಮುಖ್ಯಮಂತ್ರಿಗಳು ಒಂದು ದಿನ ಕೂಡ, ” ತಮ್ಮ ವಿರುದ್ಧ ಇಂಥಾ ಚಾನಲ್ ನಲ್ಲಿ ಸುದ್ದಿ ಬಂದಿದೆ. ನೋಡು” ಎನ್ನುವ ಒಂದು ಮಾತನ್ನೂ ಹೇಳಿಲ್ಲ. ಮಾಧ್ಯಮ ಸ್ವಾತಂತ್ರ್ಯಕ್ಕೆ ಮುಖ್ಯಮಂತ್ರಿಗಳು ಯಾವತ್ತೂ ಧಕ್ಕೆ ಆಗದಂತೆ ನೋಡಿಕೊಂಡಿದ್ದಾರೆ ಎಂದರು.

ಕಠಿಣ ಷರತ್ತುಗಳು ವಾಪಸ್ಸು:

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ವಿಧಿಸಿರುವ ಕಠಿಣವಾದ ಎರಡು ಷರತ್ತುಗಳನ್ನು ಸಡಿಲಗೊಳಿಸಲು ಸಭೆ ಮಾಡಿ ತೀರ್ಮಾನಿಸಲಾಗಿದೆ. ಈ ಬಗ್ಗೆ ವಾರದಲ್ಲಿ ಆದೇಶ ಹೊರಡಿಸಲಾಗುವುದು. ಇದರಿಂದ ಆರು ಸಾವಿರಕ್ಕೂ ಹೆಚ್ಚಿನ ಪತ್ರಕರ್ತರಿಗೆ ಸವಲತ್ತು ಸಿಗುವ ಸಾಧ್ಯತೆಗಳಿವೆ ಎಂದರು.

ಪತ್ರಕರ್ತರ ಸಂಘ ಮತ್ತು ಪತ್ರಕರ್ತ ಸಮುದಾಯ ಅವರ ಒತ್ತಡದಿಂದಲೇ ರಾಜ್ಯದಲ್ಲಿ ‘ಜಾಹೀರಾತು ನೀತಿ’ ತರಲಾಗಿದೆ. ವೃತ್ತಿಪರವಾಗಿ ಕಷ್ಟಪಟ್ಟು ಪತ್ರಿಕೆ ಮಾಡುವವರಿಗೆ ನೆರವಾಗಬೇಕು ಎನ್ನುವ ಕಾಳಜಿ ಜಾಹೀರಾತು ನೀತಿಯ ಹಿಂದಿದೆ. ಜಾಹೀರಾತಿ ದರ ಪರಿಷ್ಕರಣೆ ಕೂಡ ಚರ್ಚೆಯಲ್ಲಿದೆ ಎಂದರು.

ಜಾಹೀರಾತು ನೀಡಿಕೆಯಲ್ಲಿನ ತಾರತಮ್ಯ ನಿವಾರಣೆಗೆ ಕ್ರಮ

ಪತ್ರಿಕೆಗಳಿಗೆ ಜಾಹಿರಾತು ನೀಡುವ ವಿಚಾರದಲ್ಲಿ ಕೆಲವು ಸಮುದಾಯಗಳಿಗೆ ಮಾತ್ರ ಕೆನೆ ಪದರದ ಮಿತಿ ಹಾಕಿದ್ದು, ಒಂದು ಸಮುದಾಯಕ್ಕೆ ಮಾತ್ರ ಕೆನೆಪದರ ಇಲ್ಲದಿರುವುದರಿಂದ ಬಹುತೇಕ ಸಮುದಾಯಗಳ ಮಾಲೀಕರು, ಸಂಪಾದಕರುಗಳು ವಿಪರೀತ ನಷ್ಟ ಅನುಭವಿಸಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿ ಲೋಪಗಳ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಜಾಹಿರಾತು ನೀತಿಯಲ್ಲಿ ಬಹುತೇಕ ಸಮಸ್ಯೆಗಳು ಬಗೆಹರಿದಿವೆ ಎಂದರು.

ವೃತ್ತಿಪರವಾಗಿ, ನಿಯಮಿತವಾಗಿ ಪ್ರಕಟವಾಗುವ ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ. ಸ್ಥಳೀಯ ಮತ್ತು ಸಣ್ಣ ಪತ್ರಿಕೆಗಳಿಗೆ ಜಾಹೀರಾತಿನಲ್ಲಿ ತೊಂದರೆ ಆಗಬಾರದು ಎನ್ನುವ ನಿಲುವು ಮುಖ್ಯಮಂತ್ರಿಗಳದ್ದೂ ಆಗಿದೆ, ನನ್ನದೂ ಆಗಿದೆ ಎಂದರು.

ಮೂವರಿಗೆ ಅರ್ಪಿಸಿದ ಕೆವಿಪಿ

ತಮಗೆ ಸಿಗುವ ಸಾರ್ವಜನಿಕ ಸನ್ಮಾನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೋಲಾರದ ಪತ್ರಕರ್ತರು ಮತ್ತು ರಾಜ್ಯದ ಪತ್ರಕರ್ತ ಸಮುದಾಯಕ್ಕೆ ಅರ್ಪಿಸಿದ ಕೆ.ವಿ.ಪ್ರಭಾಕರ್ ಅವರು, ಇದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

ಓದಿದ ಶಾಲೆಗೆ ನೆರವಾಗಿದ್ದು ಸಮಾಧಾನ ತಂದಿದೆ

ಪತ್ರಕರ್ತ ಸಮುದಾಯಕ್ಕೆ, ಪತ್ರಿಕಾ ವಿತರಕ ಸಮುದಾಯಕ್ಕೆ ನೆರವಾಗುವ ಜೊತೆಗೆ ನೂರಾರು ರೀತಿಯ ನೆರವು ಸರ್ಕಾರದಿಂದ ಒದಗಿಸಲಾಗಿದೆ. ಇವುಗಳ ಆಚೆಗೆ ನಾನು ಓದಿದ ಶಾಲೆಗೆ ಸರ್ಕಾರದ ನೆರವು ಒದಗಿಸಲು ಸಾಧ್ಯವಾಗಿದ್ದು, ಈ ಸರ್ಕಾರಿ ಶಾಲೆಗೆ ಮರುಜೀವ ಬಂದು ವಿದ್ಯಾರ್ಥಿಗಳ ಸಂಖ್ಯೆ 100ರ ಗಡಿ ದಾಟಿರುವುದು ಸಮಾಧಾನ ತಂದಿದೆ ಎಂದರು.

ಪರಿಣಾಮಕಾರಿ ಕೆಲಸ: ಶಿವಾನಂದ ತಗಡೂರು

KUWJ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪ್ರಭಾಕರ್ ಅವರು ಸರ್ಕಾರ ಮತ್ತು ಸಂಘಟನೆ ನಡುವೆ ಸೇತುವೆ ರೀತಿಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಮಾಧ್ಯಮ‌ ಅಕಾಡೆಮಿ‌ ಅಧ್ಯಕ್ಷೆ ಆಯೆಷಾ ಖಾನಂ ಮಾತನಾಡಿ, ಪ್ರಭಾಕರ್ ಅಧಿಕಾರ ಸ್ವೀಕಾರ ಮಾಡಿ ಮೂರು ವರ್ಷ ತುಂಬಿದ ಸಂದರ್ಭದ ಕಾರ್ಯಕ್ರಮವನ್ನು ಕೆಯುಡಬ್ಲ್ಯೂಜೆ ಅಚ್ಚುಕಟ್ಟಾಗಿ ಸಂಘಟಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಪ್ರಭಾಕರ್ ಇನ್ನೂ ಉನ್ನತ ಹುದ್ದೆ ಅಲಂಕರಿಸಲಿ ಎಂದು ಶುಭ ಹಾರೈಸಿದರು.

ರಾಜ್ಯ ಪದಾಧಿಕಾರಿಗಳಾದ ಜಿ.ಸಿ.ಲೋಕೇಶ, ಸೋಮಶೇಖರ್ ಕೆರಗೋಡು, ವಾಸುದೇವ ಹೊಳ್ಳ, ಎನ್. ರವಿಕುಮಾರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Key words: KUWJ, CM Media advisor, responsibility, K.V. Prabhakar

The post ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ ಹಾಸಿಗೆ-ಕೆ.ವಿ.ಪ್ರಭಾಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ಲಾ ಗೈಡ್‌’ ವತಿಯಿಂದ ವಿದ್ಯಾರ್ಥಿಗಳ ದತ್ತಿ ಪ್ರಶಸ್ತಿಗಾಗಿ 1 ಲಕ್ಷ ರೂ. ಕೊಡುಗೆ

ಮೈಸೂರು,ಮೇ,22,2026 (www.justkannada.in): ಪ್ರೊ ಸಿ.ಕೆ.ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ...

ರಾಜ್ಯದಲ್ಲಿ SIR ಪ್ರಕ್ರಿಯೆ: ಮತದಾರರ ಹಕ್ಕು ತಡೆಯಲು ಸಂಚು- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮೇ,22,2026 (www.justkannada.in):  ರಾಜ್ಯದಲ್ಲಿ ಜೂನ್ 30ರಿಂದ ಎಸ್ ಐಆರ್ ಪ್ರಕ್ರಿಯೆ ನಡೆಯಲಿದ್ದು...

MDA ಮಧ್ಯವರ್ತಿಗಳ ಅಡ್ಡ: RTI ಕಾರ್ಯಕರ್ತರು–ಸಿಬ್ಬಂದಿ ಶಾಮೀಲು ಆರೋಪಕ್ಕೆ ಗಂಗರಾಜು ಪ್ರಕರಣವೇ ಸಾಕ್ಷಿಯೇ.?

  ಮೈಸೂರು, ಮೇ.೨೨,೨೦೨೬ : ಮೈಸೂರು ಅಭಿವೃದ್ಧಿ ಪ್ರಾಧಿಕಾರ ( Mysore  Development...

52 ಪ್ರಕರಣಗಳ ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,22,2026 (www.justkannada.in):  ಕಾನೂನಾತ್ಮಕವಾಗಿ  52 ಪ್ರಕರಣಗಳನ್ನ ಹಿಂಪಡೆಯಬಹುದು ಎಂದು  ಸಚಿವ ಸಂಪುಟ...