ಮುಂಬೈ,ಜುಲೈ,31,2025 (www.justkannada.in): 2008ರ ಸೆಪ್ಟೆಂಬರ್ 29 ರಂದು ಮಹಾರಾಷ್ಟ್ರದ ಮಾಲೆಗಾಂವ್ ನ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಖುಲಾಸೆಗೊಳಿಸಿ ಮುಂಬೈ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
17 ವರ್ಷಗಳ ನಂತರ ತೀರ್ಪು ಪ್ರಕಟವಾಗಿದ್ದು ಎನ್‌ಐಎ ವಿಶೇಷ ನ್ಯಾಯಾಲಯ ಪ್ರಕರಣದ ಆರೋಪಿಗಳ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿದೆ.
ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್, ಮಾಜಿ ಸೇನಾಧಿಕಾರಿ ಪ್ರಸಾದ್ ಪುರೋಹಿತ್ (ನಿವೃತ್ತ), ಮೇಜರ್ ರಮೇಶ್ ಉಪಾಧ್ಯಾಯ(ನಿವೃತ್ತ), ಸುಧಾಕರ್ ಚತುರ್ವೇದಿ, ಅಜಯ್ ರಹೀರ್ಕರ್, ಸುಧಾಕರ್ ಧರ್‌ದ್ವಿವೇದಿ ಅಲಿಯಾಸ್ ಶಂಕರಾಚಾರ್ಯ ಹಾಗೂ ಸಮೀರ್ ಕುಲಕರ್ಣಿ ಅವರನ್ನು ಪ್ರಕರಣದಿಂದ ಆರೋಪಮುಕ್ತಗೊಳಿಸಲಾಗಿದೆ.
ಪ್ಟೆಂಬರ್ 29, 2008 ರಂದು ರಂಜಾನ್ ತಿಂಗಳಿನಲ್ಲಿ ಮಾಲೆಗಾಂವ್‌ನ ಮುಸ್ಲಿಂ ಏರಿಯಾದಲ್ಲಿ ಈ ಪ್ರಕರಣ ಸಂಭವಿಸಿತ್ತು.
Key words: Malegaon blast case, Seven, accused, acquitted
The post ಮಾಲೆಗಾಂವ್ ಸ್ಫೋಟ ಪ್ರಕರಣ : ಏಳು ಆರೋಪಿಗಳು ಖುಲಾಸೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.