1
July, 2025

A News 365Times Venture

1
Tuesday
July, 2025

A News 365Times Venture

ಮೂರು ವರ್ಷದಲ್ಲಿ KKRDB ಗೆ 13000 ಕೋಟಿ ರೂ. ಅನುದಾನ ನೀಡಿ ದಾಖಲೆ: ಸಿಎಂ ಸಿದ್ದರಾಮಯ್ಯ

Date:

ಯಾದಗಿರಿ ಜೂನ್, 14,2025 (www.justkannada.in): ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ವರ್ಷಕ್ಕೆ 5000 ಕೋಟಿ KKRDB ಗೆ ಕೊಡುವುದಾಗಿ ನಾವು ಚುನಾವಣೆ ವೇಳೆ ಭರವಸೆ ನೀಡಿದ್ದೆವು. ಕಾಂಗ್ರೆಸ್ ಕೊಟ್ಟ ನಮ್ಮ ಭರವಸೆಯಂತೆ ಇಲ್ಲಿಯವರೆಗೂ 13000 ಕೋಟಿ ರೂಪಾಯಿ ಹಣ ನೀಡಿದ್ದೇವೆ. ಇಲ್ಲಿಯವರೆಗೂ 5300 ಕೋಟಿ ಮೊತ್ತ ಖರ್ಚಾಗಿದ್ದು ಕಾಮಗಾರಿ ಜನರಿಗೆ ತಲುಪಿದೆ ಎಂದರು.

KKRDB ಗೆ ಕೊಡುವ ಈ ಅನುದಾನದ ಹೊರತಾಗಿ ಸರ್ಕಾರ ಇಲಾಖಾವಾರು ಕಾರ್ಯಕ್ರಮಗಳಿಗಾಗಿ ಅನುದಾನ ನೀಡುತ್ತಲೇ ಇದೆ ಎಂದರು.

ನಂಜುಂಡಪ್ಪ ಅವರ ವರದಿಯ ಆಶಯಗಳನ್ನು ನಮ್ಮ ಸರ್ಕಾರ ಈಡೇರಿಸುತ್ತಿದೆ. ಆರೋಗ್ಯ, ಶಿಕ್ಷಣ, ಉದ್ಯೋಗದಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಸಾಧಿಸುವ ಜೊತೆಗೆ ಮೂಲಭೂತ ಸೌಕರ್ಯಗಳ ಈಡೇರಿಕೆಗೆ ಹಣ ವಿನಿಯೋಗ ಮಾಡಲು ಸೂಚನೆ ನೀಡಿದ್ದೇನೆ. ಇದರ ಪ್ರಕಾರ ಅಕ್ಷರ ಆವಿಷ್ಕಾರ ನಡೆದು ಇಂದು 440.63 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಇಂದು ಉದ್ಘಾಟನೆ ಮಾಡಿದ್ದೇವೆ. ಕೊಲ್ಲೂರು ಮಲ್ಲಪ್ಪ ಅವರ ಸ್ಮಾರಕಕ್ಕೆ ಪುಕ್ಕಟೆಯಾಗಿ ಜಾಗ ಕೊಟ್ಟಿದ್ದೇವೆ. ಮಲ್ಲಪ್ಪ ಅವರು ಕಲ್ಯಾಣ ಕರ್ನಾಟಕದ ಗಾಂಧಿ ಎಂದು ಕರೆಸಿಕೊಂಡಿದ್ದವರು.  ಸ್ವಾತಂತ್ರ್ಯ ಹೋರಾಟಗಾರರಾದ ಇವರ ಸ್ಮಾರಕ ಕೂಡಲೇ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

42 ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವುದು, ಹೊಸ ಆಸ್ಪತ್ರೆಗಳ ನಿರ್ಮಾಣ ಆಗುತ್ತಿದೆ. ಈ ಭಾಗದ ಆರೋಗ್ಯ ಸವಲತ್ತು ವಿಸ್ತರಿಸಲು ಒಟ್ಟು 847 ಕೋಟಿ ಕೊಡಲು ಸರ್ಕಾರ ಯೋಜನೆ ರೂಪಿಸಿದೆ ಎಂದರು.

ರಾಜ್ಯದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಎಲ್ಲಾ ಸುಳ್ಳುಗಳಿಗೆ ಜನರೇ ಉತ್ತರ ನೀಡುತ್ತಿದ್ದಾರೆ. ಏಕೆಂದರೆ ನಾವು ಅಭಿವೃದ್ಧಿಗೆ ಕೊಟ್ಟಿರುವ ಹಣ  ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿದೆ ಎಂದರು.

ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ  

ಬೆಲೆ ಏರಿಕೆಗೆ ಕಾರಣವಾಗಿರುವುದು ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ. ಮೋದಿ ಬರುವ ಮೊದಲು ಚಿನ್ನ, ಪೆಟ್ರೋಲ್, ಡೀಸೆಲ್, ಔಷಧ, ರಸಗೊಬ್ಬರ, ಅಡುಗೆ ಎಣ್ಣೆ, ಅಡುಗೆ ಅನಿಲದ ಬೆಲೆ ಎಷ್ಟಿತ್ತು ? ಮೋದಿ ಬಂದ ಬಳಿಕ ಎಷ್ಟು ಏರಿಕೆಯಾಗಿದೆ ನೋಡಿ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ ಎಂದರು.

ಸುಳ್ಳೇ ಬಿಜೆಪಿಯ ಮನೆ ದೇವರು. ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ 371ಜೆ ಗೆ ವಿರುದ್ಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ.ಅಡ್ವಾಣಿ ಅವರು 371ಜೆ ಜಾರಿ ಮಾಡುವುದಿಲ್ಲ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂ‌ಸಿಂಗ್ ಅವರ ಹೋರಾಟಕ್ಕೆ ಮಾನ್ಯತೆ ನೀಡಿ 371ಜೆ ಜಾರಿ ಮಾಡಿದರು ಎಂದು ವಿವರಿಸಿದರು.

ನಾವು ಬಸವಣ್ಣನವರ ಆಶಯದಂತೆ ನುಡಿದಂತೆ ನಡೆಯುವರು. ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಐದು ಗ್ಯಾರಂಟಿಗಳು ಸೇರಿ 200 ಭರವಸೆಗಳು ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಎಲ್ಲಾ ಭರವಸೆಗಳನ್ನೂ ಈಡೇರಿಸಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಸಾಧಿಸಿ ತೋರಿಸುತ್ತೇವೆ ಎಂದರು.

ಜಿಎಸ್ ಟಿ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿರುವುದು ಆರ್ಥಿಕವಾಗಿ ರಾಜ್ಯ ಪ್ರಗತಿ ಪಥದಲ್ಲಿರುವುದಕ್ಕೆ ಸಾಕ್ಷಿ . ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಸಿಂಗ್ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಂವಿಧಾನ ತಿದ್ದುಪಡಿ ಮಾಡಿ 371 ಜೆ ಜಾರಿ ಮಾಡಿದರು. ಮಲ್ಲಿಕಾರ್ಜುನ ಖರ್ಗೆ, ದಿ.  ಧರಮ್ ಸಿಂಗ್ ಅವರ ಶ್ರಮ‌ ಮತ್ತು  ಹೋರಾಟ 371ಜೆ ಜಾರಿ ಹಿಂದೆ ಕೆಲಸ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದರು.vtu

Key words: Rs 13000 crore ,grant , KKRDB , three years, CM, Siddaramaiah

 

The post ಮೂರು ವರ್ಷದಲ್ಲಿ KKRDB ಗೆ 13000 ಕೋಟಿ ರೂ. ಅನುದಾನ ನೀಡಿ ದಾಖಲೆ: ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಲಕ್ಕಿ, ಲಾಟರಿ ಮುಖ್ಯಮಂತ್ರಿ- ಶಾಸಕ ಬಿ.ಆರ್ ಪಾಟೀಲ್

ಮಂಡ್ಯ,ಜುಲೈ,1,2025 (www.justkannada.in):  ಸಿದ್ದರಾಮಯ್ಯ ಲಕ್ಕಿ, ಲಾಟರಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ...

ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೇ ಹೋಗ್ತಾರೆ ಕಾದು ನೋಡಿ- ಸ್ನೇಹಮಯಿ ಕೃಷ್ಣ

ಮೈಸೂರು,ಜುಲೈ,1,2025 (www.justkannada.in): ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೇ...

IPS ಅಧಿಕಾರಿ ಅಮಾನತು ರದ್ದು ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಸೂ‍ಕ್ತ ತೀರ್ಮಾನ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜುಲೈ,1,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ...

ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನ- ಸಂಸದ ಗೋವಿಂದ ಕಾರಜೋಳ

ಬಾಗಲಕೋಟೆ,ಜುಲೈ,1,2025 (www.justkannada.in): ಕಾಂಗ್ರೆಸ್ ಸರ್ಕಾರ ಡಿಸೆಂಬರ್ 31 ದಾಟುವುದಿಲ್ಲ, ಸರ್ಕಾರ ಪತನವಾಗುತ್ತದೆ...