ಬೆಂಗಳೂರು,ಜೂನ್,12,2026 (www.justkannada.in): ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ವಿಜಯ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಅವರ ವಿರುದ್ದ ಕಪ್ಪುಬಾವುಟ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನೆಲ, ಜಲ, ಭಾಷೆಯ ವಿಚಾರದಲ್ಲಿ ರಾಜಿ ಇಲ್ಲ. ವಿಜಯ್ ಬಂದು ದೇವರ ದರ್ಶನ ಪಡೆದು ಹೋಗಲಿ. ಬಂದು ಹೋದ ತಕ್ಷಣ ನಮ್ಮ ಹಕ್ಕು ಬಿಟ್ಟು ಕೊಡುತ್ತೀವಾ. ಸುಪ್ರೀಂ ಕೋರ್ಟ್ ಈಗಾಗಲೇ ಸ್ಪಷ್ಟವಾಗಿ ಹೇಳಿದೆ ಎಂದು ತಿಳಿಸಿದರು.
ದೆಹಲಿಯಿಂದ ಮಂಗಳೂರಿಗೆ ತಮಿಳುನಾಡು ಸಿಎಂ ವಿಜಯ್ ಆಗಮಿಸುತ್ತಿದ್ದು ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿದೆ. ಕೆಲವೇ ಕ್ಷಣಗಳಲ್ಲಿ ಸಿಎಂ ವಿಜಯ್ ಮಂಗಳೂರಿಗೆ ಆಗಮಿಸಲಿದ್ದಾರೆ.
Key words: Mekedatu project, No compromise, Home Minister, Priyank Kharge
The post ಮೇಕೆದಾಟು ಯೋಜನೆ: ನೆಲ,ಜಲ ಭಾಷೆ ವಿಚಾರದಲ್ಲಿ ರಾಜಿ ಇಲ್ಲ- ಗೃಹ ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




