10
June, 2026

A News 365Times Venture

10
Wednesday
June, 2026

A News 365Times Venture

ಮೇ 20ರಂದು ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: ಕಠಿಣ ಕ್ರಮಕ್ಕೆ ಮುಂದಾದ KSRTC

Date:

ಬೆಂಗಳೂರು,ಮೇ,18,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮೇ 20ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.

ಸಾರಿಗೆ ನೌಕರರ ಒಕ್ಕೂಟಗಳು ಜಂಟಿಯಾಗಿ ಪ್ರತಿಭಟನೆ ಹಾಗೂ ಮುಷ್ಕರಕ್ಕೆ ಕರೆ ನೀಡಿದ್ದು ಮುಷ್ಕರ ನಡೆದರೆ ಸರ್ಕಾರಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಕೆಎಸ್‌ ಆರ್‌ಟಿಸಿ  ಎಂ.ಡಿ ಅಕ್ರಂ ಪಾಷಾ ಶಾಕ್ ನೀಡಿದ್ದು ಮುಷ್ಕರದಲ್ಲಿ ಭಾಗಿಯಾಗುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಮುಷ್ಕರದ ದಿನದಂದು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರಿಗೆ  ‘ನೋ ವರ್ಕ್ ನೋ ಪೆ’ ಆದೇಶ ಜಾರಿ ಮಾಡಲಿದ್ದಾರೆ. ಅಂದರೆ ಅಂದು ಯಾವುದೇ ವೇತನವನ್ನು ನೀಡಲಾಗುವುದಿಲ್ಲ. ಸಾರ್ವಜನಿಕ ಸಾರಿಗೆಗೆ ಅಡ್ಡಿಪಡಿಸುವುದು ಅಥವಾ ನಿಯಮ ಉಲ್ಲಂಘಿಸಿ ಮುಷ್ಕರದಲ್ಲಿ ಭಾಗಿಯಾಗುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಇಲಾಖಾ ಮಟ್ಟದ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅಕ್ರಂಪಾಷ ತಿಳಿಸಿದ್ದಾರೆ.

ಮುಷ್ಕರದ ಅವಧಿಯಲ್ಲಿ ಯಾವುದೇ ರೀತಿಯ ಮುಂಗಡ ರಜೆಗಳನ್ನು ಮಂಜೂರು ಮಾಡದಂತೆ ಮತ್ತು ಈಗಾಗಲೇ ರಜೆ ಪಡೆದಿರುವವರ ರಜೆಯನ್ನು (ಅತ್ಯಗತ್ಯ ಸಂದರ್ಭಗಳನ್ನು ಹೊರತುಪಡಿಸಿ) ರದ್ದುಗೊಳಿಸುವಂತೆ ಅಧಿಕಾರಿಗಳಿಗೆ  ಎಂ.ಡಿ ಅಕ್ರಂ ಪಾಷಾ ಸೂಚನೆ ನೀಡಿದ್ದಾರೆ.

Key words: Transport, employees, strike, KSRTC

The post ಮೇ 20ರಂದು ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: ಕಠಿಣ ಕ್ರಮಕ್ಕೆ ಮುಂದಾದ KSRTC appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದೆಹಲಿಗೆ ತೆರಳಿದ ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,10,2026 (www.justkannada.in):  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ...

ಸಚಿವ ಸ್ಥಾನದಲ್ಲಿ ಮುಂದುವರಿಕೆ ಬಗ್ಗೆ ಹೈಕಮಾಂಡ್ ತೀರ್ಮಾನ-ಮಧು ಬಂಗಾರಪ್ಪ

ಶಿವಮೊಗ್ಗ,ಜೂನ್,9,2026 (www.justkannada.in):  ನನ್ನನ್ನು ಸಚಿವ ಸ್ಥಾನದಲ್ಲಿ ಮುಂದುವರಿಸುವ ಬಗ್ಗೆ ಹೈಕಮಾಂಡ್ ತೀರ್ಮಾನ...

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಸ್ಪದ ಸಾವು

ಮಂಡ್ಯ,ಜೂನ್,9,2026 (www.justkannada.in): ಒಂದೇ ಕುಟುಂಬದ ಮೂವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ...

‘ಕೈ’ನಾಯಕರು ದೇವೇಗೌಡರ ಕುರಿತು  ಮೊಸಳೆ ಕಣ್ಣೀರು ಸುರಿಸುವ ಅಗತ್ಯವಿಲ್ಲ- ಬಿವೈ ವಿಜಯೇಂದ್ರ ಟಾಂಗ್

ಬೆಂಗಳೂರು,ಜೂನ್,9,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್...