ಮೈಸೂರು,ಜುಲೈ,26,2025 (www.justkannada.in): ಹಾಸನದ ಅರಸಿಕೆರೆಯಲ್ಲಿ ಕಾರ್ಯಕ್ರಮಗಳಲ್ಲಿ ಪಾಲ್ಗಂಡಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಮೈಸೂರಿಗೆ ದಿಢೀರ ಪ್ರಯಾಣ ಬೆಳೆಸಿದರು.
ನಾಳೆ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಸನದಿಂದ ಮೈಸೂರಿಗೆ ಆಗಮಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ಬರಬೇಕಿದ್ದ ಸಿಎಂ ಸಿದ್ದರಾಮಯ್ಯ ಹವಾಮಾನ ವೈಪರೀತ್ಯ ಹಿನ್ನೆಲೆ ರಸ್ತೆ ಮಾರ್ಗದಲ್ಲಿ ಮೈಸೂರಿಗೆ ಆಗಮಿಸಿದ್ದಾರೆ.
ಟಿ.ಕಾಟೂರು ಗ್ರಾಮದ ತೋಟದ ಮನೆಯಲ್ಲಿ ನಾಳೆ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಪುಣ್ಯಸ್ಮರಣೆ ಪೂಜಾ ಕಾರ್ಯಗಳು ನೆರವೇರಲಿದ್ದು ಕುಟುಂಬಸ್ಥರ ಜೊತೆಗೂಡಿ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ.
Key words: CM, Siddaramaiah, arrival, Mysore
The post ಮೈಸೂರಿಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಆಗಮನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.