30
April, 2026

A News 365Times Venture

30
Thursday
April, 2026

A News 365Times Venture

ಮೈಸೂರಿನಲ್ಲಿ ಅವೈಜ್ಞಾನಿಕ ಘನತ್ಯಾಜ್ಯ ಘಟಕ ತೆರವಿಗೆ ಆಗ್ರಹ: ಸಂಸತ್ ನಲ್ಲಿ ಕನ್ನಡದಲ್ಲೇ ವಿಷಯ ಮಂಡಿಸಿದ ಸಂಸದ ಯದುವೀರ್

Date:

ನವದೆಹಲಿ,ಮಾರ್ಚ್,13,2025 (www.justkannada.in):  ಮೈಸೂರು ಸಮೀಪ ಹಳೆ ಕೆಸರೆ ಗ್ರಾಮದ ಅವೈಜ್ಞಾನಿಕ ಘನತ್ಯಾಜ್ಯ ಘಟಕ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್‌ ಅಧಿವೇಶನದಲ್ಲಿ ಮಾತೃಭಾಷೆ ಕನ್ನಡದಲ್ಲಿ ವಿಷಯ ಮಂಡಿಸುವ ಮೂಲಕ  ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗಮನ ಸೆಳೆದಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸಿದ್ಧಲಿಂಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳೆ ಕೆಸರೆ ಗ್ರಾಮದಲ್ಲಿ ಅವೈಜ್ಞಾನಿಕ ಘನತ್ಯಾಜ್ಯ ಘಟಕ ನಿರ್ಮಾಣದಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಸಂಸತ್  ಅಧಿವೇಶನದಲ್ಲಿ ನಿನ್ನೆ ಪ್ರಸ್ತಾಪ ಮಾಡಿದ ಸಂಸದ ಯದುವೀರ್, ನನ್ನ ಕ್ಷೇತ್ರ ವ್ಯಾಪ್ತಿಯ ಹಳೇ ಕೆಸರೆ ಗ್ರಾಮದಲ್ಲಿ ಘನತ್ಯಾಜ್ಯ ಘಟಕ ನಿರ್ಮಾಣದ ವೇಳೆ ಕಾನೂನು ರೀತಿ ಕ್ರಮಗಳನ್ನು ತೆಗೆದುಕೊಂಡಿಲ್ಲ, ಯಾವುದೇ ನೀತಿ-ನಿಯಮಗಳನ್ನು ಪಾಲಿಸಿಲ್ಲ. ಘನತ್ಯಾಜ್ಯ ನಿರ್ಮಾಣಕ್ಕೆ ಶಾಸನಬದ್ಧ ಅನುಮತಿಗಳನ್ನು ಪಡೆಯದೇ ನಿರ್ಮಾಣ ಮಾಡಲಾಗಿದೆ. ಅವೈಜ್ಞಾನಿಕವಾಗಿ  ನಿರ್ವಹಣಾ ಘಟಕವನ್ನು ಸ್ಥಾಪಿರುವುದರಿಂದ ಕೊಳೆತ ದುರ್ವಾಸನೆ ಹೊರ ಹೊಮ್ಮುತ್ತಿದ್ದು,  ಘನ ತ್ಯಾಜ್ಯದಿಂದ ಪರಿಸರದ ಮೇಲೆ ಭಾರಿ ಪರಿಣಾಮ ಬೀರಿದೆ. ಇದರಿಂದ ಸುತ್ತಮುತ್ತಲ ಗ್ರಾಮದ ನಿವಾಸಿಗಳು ನಿರಂತರ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಯಾವುದನ್ನೂ ಪಾಲಿಸಿಲ್ಲ ಎಂದು  ಸಮಸ್ಯೆಗಳ ಬಗ್ಗೆ ವಿವರಿಸಿದರು.

ಹಾಗೆಯೇ ಈ ಪ್ರದೇಶದ ಬಳಿಯೇ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ ಜಾಗವಿದ್ದು, ಇಲ್ಲಿಯೂ ಅವೈಜ್ಞಾನಿಕವಾಗಿ ತ್ಯಾಜ್ಯವನ್ನು ಸುಡುವುದು ಹೆಚ್ಚಾಗಿದೆ. ಇದರಿಂದ ಹೊರ ಹೊಮ್ಮುತ್ತಿರುವ ಹೊಗೆ ಹಾಗೂ ವಾಸನೆಯಿಂದ ಜನರಿಗೆ ತೊಂದರೆಯಾಗಿದೆ.  ಈ ಬಗ್ಗೆ ಜನರು ಪ್ರತಿಭಟನೆ ನಡೆಸಿ, ಹಿರಿಯ ಅಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರೂ ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಈ ಅವೈಜ್ಞಾನಿಕ ಘಟಕಗಳನ್ನು ಕೂಡಲೇ ತೆರವುಗೊಳಿಸಬೇಕು.  ನಮ್ಮ ಕ್ಷೇತ್ರ ವ್ಯಾಪ್ತಿಯ ಸಾವಿರಾರು ಜನರ ಆರೋಗ್ಯ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು  ಸಂಸದ ಯದುವೀರ್ ಸಂಸತ್ ಅಧಿವೇಶನದಲ್ಲಿ ಆಗ್ರಹಿಸಿದ್ದಾರೆ.

Key words: unscientific, solid waste unit, Mysore,  MP Yaduveer, Parliament

The post ಮೈಸೂರಿನಲ್ಲಿ ಅವೈಜ್ಞಾನಿಕ ಘನತ್ಯಾಜ್ಯ ಘಟಕ ತೆರವಿಗೆ ಆಗ್ರಹ: ಸಂಸತ್ ನಲ್ಲಿ ಕನ್ನಡದಲ್ಲೇ ವಿಷಯ ಮಂಡಿಸಿದ ಸಂಸದ ಯದುವೀರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...