ಮೈಸೂರು,ಜುಲೈ,30,2026 (www.justkannada.in): ಆಗಸ್ಟ್ 1 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಾಳೆ ಮೈಸೂರಿನಲ್ಲಿ ನಡೆಯಬೇಕಿದ್ದ ಸಿಎಂ ಸ್ವಾಗತ ಕಾರ್ಯಕ್ರಮ ರದ್ದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಳೆ ಮಧ್ಯಾಹ್ನ ಜೆಕೆ ಮೈದಾನದಲ್ಲಿ ಸಿಎಂ ಸ್ವಾಗತ ಸಮಾವೇಶ ಆಯೋಜನೆ ಮಾಡಲಾಗಿತ್ತು. ಈ ಬಗ್ಗೆ ಸಚಿವ ಯತೀಂದ್ರ. ಸಿದ್ದರಾಮಯ್ಯ ಹೇಳಿದ್ದರು. ಡಿಕೆ ಶಿವಕುಮಾರ್ ಸಿಎಂ ಆದ ನಂತರ ಮೈಸೂರಿಗೆ ಮೊದಲ ಬಾರಿಗೆ ಆಗಮಿಸುತ್ತಿರುವ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ಸಿಎಂ ಸ್ವಾಗತಕ್ಕೆ ಸಿದ್ದತೆ ನಡೆದಿತ್ತು.
ಆದರೆ ನಾಡಿದ್ದು ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸ್ವಾಮಿ ವಿವೇಕಾನಂದ ಸ್ಮಾರಕ ಉದ್ಘಾಟನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಿಎಂ ಸ್ವಾಗತ ಸಮಾವೇಶ ರದ್ದು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
Key words: CM’s welcome program, scheduled, cancelled, Mysore, tomorrow
The post ಮೈಸೂರಿನಲ್ಲಿ ನಾಳೆ ನಡೆಯಬೇಕಿದ್ದ ಸಿಎಂ ಸ್ವಾಗತ ಕಾರ್ಯಕ್ರಮ ರದ್ದು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




