7
August, 2026

A News 365Times Venture

7
Friday
August, 2026

A News 365Times Venture

ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತ: ಬಿಜಿಎಸ್ ಕಾಲೇಜಿನ ಬಿಸಿಎ ವಿದ್ಯಾರ್ಥಿನಿ ಕೀರ್ತನಾ ಸಾವು

Date:

 

ಮೈಸೂರು, ಆ. 7: ನಗರದ ಕುವೆಂಪುನಗರದ ಜ್ಞಾನಗಂಗಾ ಶಾಲೆ ಸಮೀಪ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಿಜಿಎಸ್ ಕಾಲೇಜಿನ ಬಿಸಿಎ ವಿದ್ಯಾರ್ಥಿನಿ ಕೀರ್ತನಾ ಮೃತಪಟ್ಟಿದ್ದಾರೆ.

ಕೀರ್ತನಾ ದ್ವಿಚಕ್ರ ವಾಹನದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿಯೊಂದಿಗೆ ತೆರಳುತ್ತಿದ್ದ ವೇಳೆ ನಗರ ಸಾರಿಗೆ ಬಸ್‌ಗೆ ಸಿಲುಕಿ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಬಸ್‌ನ ಚಕ್ರ ಕೀರ್ತನಾ ಅವರ ಮೈಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಗಂಭೀರವಾಗಿ ಗಾಯಗೊಂಡರು.

ಅವರನ್ನು ಸಾರ್ವಜನಿಕರು ತಕ್ಷಣ ಸಮೀಪದ ಭಾನವಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಕೀರ್ತನಾ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ದ್ವಿಚಕ್ರ ವಾಹನದಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿನಿಗೂ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಕುರಿತು ವೈದ್ಯರು ನಿಗಾ ವಹಿಸಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಕುವೆಂಪುನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ವಿದ್ಯಾರ್ಥಿನಿಯ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಸಹಪಾಠಿಗಳು ಹಾಗೂ ಕಾಲೇಜು ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Key words: Mysuru, BGS College, BCA Student, Killed in, City Bus Accident

SUMMARY:

Mysuru: BGS College BCA Student Killed in City Bus Accident

Mysuru, Aug. 7: A BCA student of BGS College, identified as Keerthana, died after a tragic road accident involving a city bus near Jnanaganga School in Kuvempunagar on Friday.

Keerthana was riding a scooter with another student when they were involved in the accident. The bus reportedly ran over her, causing fatal injuries.

AI Created Image

She was rushed to Bhanavi Hospital, where doctors declared her dead. The other student sustained injuries and is undergoing treatment.

Kuvempunagar police have registered a case and launched an investigation into the incident.

The post ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತ: ಬಿಜಿಎಸ್ ಕಾಲೇಜಿನ ಬಿಸಿಎ ವಿದ್ಯಾರ್ಥಿನಿ ಕೀರ್ತನಾ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು, ಆಗಸ್ಟ್​​,7,2026 (www.justkannada.in): . ಸಿಎಂ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ...

ನನ್ನ ಅವಶ್ಯಕತೆ ಇರಲಿಲ್ಲವೇನೋ? ಅದಕ್ಕೆ ಕಡೇ ಕ್ಷಣದಲ್ಲಿ ಕೈ ಬಿಟ್ಟಿದ್ದಾರೆ- ಮಂಕಾಳವೈದ್ಯ

ಮೈಸೂರು,ಆಗಸ್ಟ್,7,2026 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೆ ಮಂತ್ರಿಗಿರಿ ಕೈತಪ್ಪಿದ...

ಮೂಲಸೌಕರ್ಯಗಳೊಂದಿಗೆ ಬೀದರ್ ನಗರದ ಸಮಗ್ರ ಅಭಿವೃದ್ಧಿಗೆ ಬದ್ಧ- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ.

ಬೀದರ್,ಆಗಸ್ಟ್,5,2026 (www.justkannada.in):  ಬೀದರ್ ನಗರದ ಸಮಗ್ರ ಅಭಿವೃದ್ಧಿ, ನಾಗರಿಕರ ಮೂಲಭೂತ ಸೌಕರ್ಯ...

ಸಚಿವ ಸ್ಥಾನ ಸಿಗದಿದ್ದಕ್ಕೆ ರಾಜೀನಾಮೆ:  ವಾಪಸ್ ಪಡೆದ ‘ಕೈ’ ಶಾಸಕ

ಬೆಂಗಳೂರು,ಆಗಸ್ಟ್,5,2026 (www.justkannada.in): ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ  ತಮಗೆ ಮಂತ್ರಿಗಿರಿ ಸಿಗದ...