ಮೈಸೂರು ಸೆಪ್ಟಂಬರ್,28,2026 (www.justkannda.in): ವಿಶ್ವವಿಖ್ಯಾತ ಮೈಸೂರು ದಸರಾ 2026ರ ಕಾರ್ಯಕ್ರಮದ ಉದ್ಘಾಟನೆಗೆ ಕೊಪ್ಪಳದ ಶ್ರೀ ಗವಿಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಯ ಅವರನ್ನು ಆಯ್ಕೆ ಮಾಡಲಾಗಿದ್ದು ಅಕ್ಟೋಬರ್ 3 ರಂದು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಲಿದೆ.
ಅಕ್ಟೋಬರ್ 11 ರಂದು ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ನೆರವೇರಲಿದೆ. ಜಿಲ್ಲಾಡಳಿತದ ಪರವಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ:ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಹಾಗೂ ದಸರಾ ಮಹೋತ್ಸವದ ವಿಶೇಷಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಹಾಗೂ ಸ್ವಾಗತ ಸಮಿತಿ ಅವರು ಅಕ್ಟೋಬರ್ 3 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ಗವಿಮಠಕ್ಕೆ ತೆರಳಿ ಗೌರವ ಪೂರ್ವಕವಾಗಿ ಆಹ್ವಾನ ಪತ್ರಿಕೆ ನೀಡಿ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಿ ಯಶಸ್ವಿಗೊಳಿಸುವಂತೆ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳನ್ನು ಆಹ್ವಾನಿಸಲಿದ್ದಾರೆ.




