26
June, 2026

A News 365Times Venture

26
Friday
June, 2026

A News 365Times Venture

ಮೈಸೂರು- ಬೆಂಗಳೂರು ರೈಲಿನಲ್ಲಿ ದರೋಡೆ ಮಾಡಿದ್ದ ನಾಲ್ವರು ಅಂದರ್

Date:

ಮೈಸೂರು,ಫೆಬ್ರವರಿ,14,2025 (www.justkannada.in): ಮೈಸೂರು- ಬೆಂಗಳೂರು ರೈಲಿನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಂದು ದರೋಡೆ ಮಾಡಿದ್ದ ನಾಲ್ವರು ಖದೀಮರನ್ನ ಮೈಸೂರಿನ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಶೈಕ್ ಸೋಹ್ಮಲ್, ಸೋಹೈಲ್ ಖಾನ್, ಮೊಹಮ್ಮದ್ ಯಾಸೀನ್, 17 ವರ್ಷದ ಅಪ್ರಾಪ್ತ ಬಂಧಿತ ಆರೋಪಿಗಳು.  ಬಂಧಿತರಿಂದ 6,885 ರೂ ನಗದು, 9 ಬೆಲೆ ಬಾಳುವ ಮೊಬೈಲ್ ಫೋನ್ ಗಳನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಫೆಬ್ರವರಿ 11ರ ಮಧ್ಯರಾತ್ರಿ ರೈಲಿ‌ನಲ್ಲಿ ಈ ದರೋಡೆ ಪ್ರಕರಣ ನಡೆದಿತ್ತು. ಮದ್ದೂರು ಸಮೀಪ ರೈಲಿಗೆ ಹತ್ತಿದ್ದ ಈ ದರೋಡೆಕೋರರು ಮಲಗಿದ್ದ ಚಂದನ್ ಎಂಬವರ ಮೇಲೆರಗಿ ದಾಳಿ ಮಾಡಿ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದರು.  ನಂತರ ಬಟನ್ ಚಾಕು ತೋರಿಸಿ ಚಂದನ್ ಬಳಿಯಿದ್ದ ಹಣ, ಮೊಬೈಲ್ ಕಸಿದಿದ್ದ ಖದೀಮರು ಬಳಿಕ ಗಗನ್, ಶಿವಾನಂದ್ ಸೇರಿ ಹಲವರ‌ ಮೇಲೂ ಹಲ್ಲೆ ನಡೆಸಿ ನಂತರ ಚನ್ನಪಟ್ಟಣ ಸ್ಟೇಷನ್ ಬಳಿ ಇಳಿದು ಪರಾರಿಯಾಗಿದ್ದರು.

ಮರುದಿನ ಚಂದನ್ ಮೈಸೂರು ರೈಲ್ವೆ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ರೈಲ್ವೆ ನಿಲ್ದಾಣಗಳ‌ ಸಿಸಿಟಿವಿ ಆಧರಿಸಿ ಕಾರ್ಯಾಚರಣೆ ನಡೆಸಿದ ಮೈಸೂರು ರೈಲ್ವೆ ಪೊಲೀಸರು ನಾಲ್ವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.

Key words: Mysore-Bengaluru, train, robbed, passenger, arrested

The post ಮೈಸೂರು- ಬೆಂಗಳೂರು ರೈಲಿನಲ್ಲಿ ದರೋಡೆ ಮಾಡಿದ್ದ ನಾಲ್ವರು ಅಂದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ರೆ ಕಠಿಣ ಕ್ರಮ ಅನಿವಾರ್ಯ-ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,26,2026 (www.justkannada.in): ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ದರೆ ಕಠಿಣ...

ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ: ವೈದ್ಯರೊಬ್ಬರ ಶವ ಪತ್ತೆ

ಮಂಡ್ಯ, ಜೂನ್,26,2026 (www.justkannada.in):  ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ...

ಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿ  ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು, ಜೂನ್,26,2026 (www.justkannada.in): ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ...

ಆಣೆ ಪ್ರಮಾಣ ಮಾಡಿ ಅಂತಾ ವಿಜಯೇಂದ್ರ ಹೇಳಿದ್ದು ಸರಿಯಲ್ಲ- ಮುರುಗೇಶ್ ನಿರಾಣಿ

ಬಾಗಲಕೋಟೆ,ಜೂನ್,26,2026 (www.justkannada.in): ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಆಗಿರುವುದು ಸ್ಪಷ್ಟ. ಆದರೆ...