7
October, 2026

A News 365Times Venture

7
Wednesday
October, 2026

A News 365Times Venture

ಮೈಸೂರು: ವೈಯಕ್ತಿಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ – ಪಾಲಿಕೆ ಸಿಬ್ಬಂದಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ

Date:

 

ಮೈಸೂರು, OCT.06,2026: ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ವೇಳೆ ಮೈಸೂರು ಮಹಾನಗರ ಪಾಲಿಕೆಯ ಅಭಯ ತಂಡದ ಸಿಬ್ಬಂದಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಘಟನೆ ಎಫ್‌ಟಿಎಸ್ ವೃತ್ತದ ಬಳಿ ನಡೆದಿದೆ.

ಪಾಲಿಕೆ ಅಭಯ ತಂಡದಲ್ಲಿ ಕಾರ್ಯನಿರ್ವಹಿಸುತ್ತಿರುವ ರಘು ಹಲ್ಲೆಗೊಳಗಾದವರು. ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಮಾದೇಶ ಮತ್ತು ಆಕಾಶ್ ಎಂಬವರು ರಘು ಅವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಯಿಂದ ರಘು ಗಾಯಗೊಂಡಿದ್ದು, ಘಟನೆ ತಿಳಿದು ಸ್ಥಳಕ್ಕೆ ಧಾವಿಸಿದ ಪಾಲಿಕೆ ಅಧಿಕಾರಿಗಳು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ ಸಂಬಂಧ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾದೇಶ ಮತ್ತು ಆಕಾಶ್ ಅವರನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಘಟನೆಯ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

KEY WORDS:

Mysuru MCC worker attack, FTS Circle attack, Mysuru crime news, MCC Abhaya team, Raghuh attack, Mysuru Madesh and Akash arrested, Mysuru police

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಮೇಲೆ ಇಡಿ ದಾಳಿ, ಪರಿಶೀಲನೆ

ಬೆಂಗಳೂರು,ಅಕ್ಟೋಬರ್,6,2026 (www.justkannada.in): ಕೆಪಿಎಸ್​​ಸಿ ಪಶುವೈದ್ಯ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ತನಿಖೆ ಮುಂದುವರಿದಿದ್ದು,ಈ...

ಏಷ್ಯನ್ ಗೇಮ್ಸ್ ಕ್ರೀಡಾಪಟುಗಳಿಗೆ ಸನ್ಮಾನ: 8 ಪದಕ ವಿಜೇತರಿಗೆ ನಗದು ಬಹುಮಾನ ಘೋಷಣೆ

ಬೆಂಗಳೂರು, ಅಕ್ಟೋಬರ್,06,2026 (www.justkannada.in) ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ...

ಕನ್ನಡ ಕೈಬರಹ ಉಳಿಸಲು ಹಿರಿಯ ಲೇಖಕ ರಘುಪತಿ ತಾಮ್ಹನ್ ಕರ್ ಸಲಹೆ

ಮೈಸೂರು,ಅಕ್ಟೋಬರ್,6,2026 (www.justkannada.in):  ಇಂದಿನ ಮಕ್ಕಳು ಕನ್ನಡವನ್ನು ಇಂಗ್ಲಿಷಿನಲ್ಲಿ ಬರೆಯುತ್ತಿದ್ದಾರೆ. ಇದಕ್ಕಾಗಿ ಕನ್ನಡ...

ಮೈಸೂರು ದಸರಾ ಹಿನ್ನೆಲೆ: ಕಾಯ್ದಿರಿಸದ ವಿಶೇಷ ರೈಲುಗಳ ಸಂಚಾರಕ್ಕೆ ನಿರ್ಧಾರ

ಮೈಸೂರು,ಅಕ್ಟೋಬರ್,6,2026 (www.justkannada.in): ಮೈಸೂರು ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು...