3
June, 2026

A News 365Times Venture

3
Wednesday
June, 2026

A News 365Times Venture

ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಯತೀಂದ್ರ ಸಿದ್ದರಾಮಯ್ಯ

Date:

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ನಂತರ 13 ಮಂದಿ ಸಚಿವರಾಗಿ ಪದಗ್ರಹಣ ಮಾಡಿದ್ದು ಮೊದಲ ಬಾರಿಗೆ ಸಚಿವರಾಗಿ ಯತೀಂದ್ರ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದರು.

ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಯತೀಂದ್ರ ಸಿದ್ದರಾಮಯ್ಯ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈಶ್ವರ್ ಖಂಡ್ರೆ, ಭೈರತಿ ಸುರೇಶ್, ಎಂ.ಬಿ ಪಾಟೀಲ್, ರಾಮಲಿಂಗರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ , ಯು ಟಿ ಖಾದರ್ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಯತೀಂದ್ರ ಸಿದ್ದರಾಮಯ್ಯ ಮತ್ತು ಯು.ಟಿ ಖಾದರ್ ಅವರನ್ನ ಹೊರತುಪಡಿಸಿ ಉಳಿದವರು ಸಿದ್ದರಾಮಯ್ಯ ಸಂಪುಟದಲ್ಲೂ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. ಯು.ಟಿ ಖಾದರ್ ವಿಧಾನಸಭೆ ಸ್ಪೀಕರ್ ಆಗಿದ್ದರು. ಉಳಿದ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ ತೀವ್ರ ಪೈಪೋಟಿ ಇದ್ದು  ಶಾಸಕರು ಲಾಬಿ ಹೆಚ್ಚಾಗಿದೆ.  ಇನ್ನು ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ,  ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ಸತೀಶನ್,  ಇನ್ಫೋಸಿಸ್ ನಾರಾಯಣಮೂರ್ತಿ,  ಸುಧಾಮೂರ್ತಿ ಅವರು ಸೇರಿ ಹಲವು ಉದ್ಯಮಿಗಳು ನಾಡಿನ ವಿವಿಧ ಮಠಾಧೀಶರು ಸೇರಿ ಹಲವರು  ಪಾಲ್ಗೊಂಡಿದ್ದರು.

Key words: Yathindra Siddaramaiah, oath, minister, first time

The post ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಕನ್ನಡದಲ್ಲೇ ಶುಭಕೋರಿದ  ಪ್ರಧಾನಿ ಮೋದಿ

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದ ಡಿ.ಕೆ...

ಸಿಎಂ ಆಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್ ವಿಧಾನಸೌಧ ರೌಂಡ್ಸ್ : ಪ್ರತಿಮೆಗಳಿಗೆ ಪುಷ್ಪಾರ್ಚನೆ

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ...

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ HDK

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ...

ಡಿಸಿಎಂ ಆಗಿ ಪರಮೇಶ್ವರ್, ಸಚಿವರಾಗಿ ಕೆಎಚ್ ಮುನಿಯಪ್ಪ, ಕೆ.ಜೆ ಜಾರ್ಜ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ಉಪಮುಖ್ಯಮಂತ್ರಿಯಾಗಿ  ಡಾ.ಜಿ.ಪರಮೇಶ್ವರ್ ಹಾಗೂ ಸಚಿವರಾಗಿ ಕೆ.ಎಚ್ ಮುನಿಯಪ್ಪ...