16
March, 2026

A News 365Times Venture

16
Monday
March, 2026

A News 365Times Venture

ಮೊಬೈಲ್ ಕ್ಯಾಂಟಿನ್ ಗೆ ಸಹಾಯಧನ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Date:

ಬೆಂಗಳೂರು ಗ್ರಾಮಾಂತರ, ಮಾರ್ಚ್,16,2026 (www.justkannada.in): ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 30 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Enterprenuership (EP) ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲಾಗುತ್ತದೆ. ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ.

ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ನಂ.09, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಕಛೇರಿ ಸಮಯದಲ್ಲಿ ಮಾರ್ಚ್ 30 ರೊಳಗೆ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Mobile canteen, subsidy,  Application, deadline, extended

The post ಮೊಬೈಲ್ ಕ್ಯಾಂಟಿನ್ ಗೆ ಸಹಾಯಧನ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾಸ್ ಸಿಲಿಂಡರ್ ಪೂರೈಕೆ: ಒಂದೆರಡು ವಾರದಲ್ಲಿ ಸಹಜ ಸ್ಥಿತಿಗೆ-ಸಚಿವ ಕೆ.ಹೆಚ್. ಮುನಿಯಪ್ಪ‌

ಬೆಂಗಳೂರು, ಮಾರ್ಚ್,16,2026 (www.justkannada.in): ರಾಜ್ಯದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ ಇಲ್ಲದೆ...

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆಯಾದ್ರೆ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ

ಬೆಂಗಳೂರು ಗ್ರಾಮಾಂತರ, ಮಾರ್ಚ್,16,2026 (www.justkannada.in): ಜಿಲ್ಲೆಯಾದ್ಯಂತ ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ...

ಇರಾನ್-ಇಸ್ರೇಲ್ ಯುದ್ದ: 4335 ವಿಮಾನಗಳ ಹಾರಾಟ ರದ್ದು

ನವದೆಹಲಿ,ಮಾರ್ಚ್,16,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ  ಪ್ರಾರಂಭವಾದಾಗಿನಿಂದ ಈವರೆಗೆ 4335 ವಿಮಾನಗಳ ಹಾರಾಟ...

ಅಧಿವೇಶನದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪ: ಮೂವರ ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ

ಬೆಂಗಳೂರು,ಮಾರ್ಚ್,16,2026 (www.justkannada.in):  ಬಜೆಟ್ ಅಧಿವೇಶನದ ವೇಳೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ...