6
March, 2026

A News 365Times Venture

6
Friday
March, 2026

A News 365Times Venture

ಯಜಿ-ಸಿಇಟಿ:2025: ಸೀಟು ಹಂಚಿಕೆ ಮಂಥನ’ ಕಾರ್ಯಾಗಾರ ಜೂ.28ಕ್ಕೆ: ಸಚಿವ ಸುಧಾಕರ್

Date:

ಬೆಂಗಳೂರು, ಜೂ.೨೫, ೨೦೨೫: ವೃತ್ತಿಪರ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆ ಸುಗಮಗೊಳಿಸುವುದರ ಭಾಗವಾಗಿ ಪ್ರಸಕ್ತ ವರ್ಷದ ಸಿಇಟಿ ಅಭ್ಯರ್ಥಿಗಳು ಹಾಗೂ ಪೋಷಕರಿಗೆ ಸೀಟು ಹಂಚಿಕೆ ವಿಧಾನದ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವತಿಯಿಂದ ಜೂನ್ 28ರಂದು ರಾಜ್ಯದ ಎಲ್ಲ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ‘ಯಜಿಸಿಇಟಿ-2025: ಸೀಟು ಹಂಚಿಕೆ ಮಂಥನ’ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್ ಕಾಲೇಜು,  8 ಅನುದಾನಿತ, 6 ವಿಟಿಯು ಸಂಯೋಜಿತ ಎಂಜಿನಿಯರಿಂಗ್ ಕಾಲೇಜುಗಳು ಹಾಗೂ  9 ಜಿಲ್ಲೆಗಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪೋಷಕರು/ವಿದ್ಯಾರ್ಥಿಗಳ ಎಲ್ಲ ರೀತಿಯ ಅನುಮಾನಗಳಿಗೆ ಪರಿಹಾರ ಲಭ್ಯವಾಗಲಿದೆ. ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಇಲ್ಲದ ಚಿಕ್ಕಮಗಳೂರು, ಹುಬ್ಬಳ್ಳಿ (ಧಾರವಾಡ ಜಿಲ್ಲೆ),

ಕೆ.ಜಿ.ಎಫ್ (ಕೋಲಾರ), ಮಂಗಳೂರು, ಶಿವಮೊಗ್ಗ, ತುಮಕೂರು, ಉಡುಪಿ, ವಿಜಯಪುರ, ಸುರಪುರ (ಯಾದಗಿರಿ)ದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಈ ಮಂಥನ ಕಾರ್ಯಕ್ರಮ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.

ಕೌನ್ಸೆಲಿಂಗ್ ಹೇಗೆ ನಡೆಯುತ್ತದೆ? ಕಾಲೇಜು ಆಯ್ಕೆ ಹೇಗೆ? ಆಪ್ಷನ್ ಎಂಟ್ರಿ ಯಾವ ರೀತಿ ಮಾಡಬೇಕು?- ಇಂತಹ ಪದೇಪದೇ ಕೇಳಿಬರುವ ಪ್ರಶ್ನೆಗಳಿಗೆ ಈ ಕಾರ್ಯಕ್ರಮದಲ್ಲಿ ಉತ್ತರ ದೊರೆಯಲಿದೆ ಎಂದು ಸಚಿವರು ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಮುಖ್ಯವಾಗಿ, ಕೆಲವರು ಸೀಟು ಹಂಚಿಕೆ ಪ್ರಕ್ರಿಯೆ ಕಬ್ಬಿಣದ ಕಡಲೆ ಎಂದು ಭಾವಿಸಿದ್ದಾರೆ. ಇದನ್ನೇ ಕೆಲವರು ತಮ್ಮ ಬಂಡವಾಳವನ್ನಾಗಿ ಮಾಡಿಕೊಂಡು ಪೋಷಕರು/ ವಿದ್ಯಾರ್ಥಿಗಳನ್ನು ಸುಲಿಗೆ ಮಾಡಿರುವ ಪ್ರಕರಣಗಳೂ  ನಡೆದಿವೆ. ಅಲ್ಲದೆ, ಅಂತಹ ಮೋಸದ ಜಾಲಗಳು ಈಗಲೂ ಸಕ್ರಿಯವಾಗಿರಬಹುದು. ಇದನ್ನು ತಪ್ಪಿಸುವ ದಿಸೆಯಲ್ಲಿ ಪೋಷಕರು ಹಾಗೂ ವಿದ್ಯಾರ್ಥಿ ಸಮುದಾಯದಕ್ಕೆ ಸ್ಪಷ್ಟ ಹಾಗೂ ನಿಖರ ಮಾಹಿತಿಯನ್ನು ಕಾರ್ಯಕ್ರಮದ ಮೂಲಕ  ನೀಡಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರು ತಮಗೆ ಹತ್ತಿರದಲ್ಲಿರುವ ಕಾಲೇಜಿಗೆ ಭೇಟಿ ನೀಡಿ ಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಬಗ್ಗೆ ಮಾಹಿತಿ ಪಡೆಯಬಹುದು ಎಂದು ಸುಧಾಕರ್ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆಗಳ ಮೂಲಕ ಮನಮುಟ್ಟುವಂತೆ ವಿವರಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ನಮ್ಮ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಶೈಕ್ಷಣಿಕ ಪ್ರಗತಿ ಬಗ್ಗೆಯೂ  ಬೋಧಕ ಸಿಬ್ಬಂದಿ, ವಿದ್ಯಾರ್ಥಿಗಳು ಮಾಹಿತಿ ನೀಡಲಿದ್ದಾರೆ. ಪಾರದರ್ಶಕತೆಗೆ ಒತ್ತು ನೀಡುತ್ತಾ ಕಾಲಕಾಲಕ್ಕೆ ಹೊಸ ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳುತ್ತಾ ಸಾಗಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಈ ಯುಜಿಸಿಇಟಿ ಸೀಟು ಹಂಚಿಕೆ ಮಂಥನ ಉಪಕ್ರಮವು ಒಟ್ಟಾರೆ ಸಿಇಟಿ ಪ್ರಕ್ರಿಯೆ ಇನ್ನಷ್ಟು ಸುಗಮಗೊಳಿಸಲಿದೆ ಎಂಬ ವಿಶ್ವಾಸವಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

key words: UGCET:2025, Seat allocation, ‘Manthan’, workshop, Minister Sudhakar

vtu

SUMMARY:

UG-CET:2025: Seat allocation ‘Manthan’ workshop on June 28: Minister Sudhakar

As part of streamlining the admission process for professional courses, the Karnataka Examinations Authority (KEA) has organized a workshop ‘UGCET-2025: Seat Allocation Manthan’ on June 28 in all government engineering colleges in the state to provide clear information about the seat allocation method to current year’s CET candidates and their parents, Higher Education Minister Dr. M.C. Sudhakar said.

The post ಯಜಿ-ಸಿಇಟಿ:2025: ಸೀಟು ಹಂಚಿಕೆ ಮಂಥನ’ ಕಾರ್ಯಾಗಾರ ಜೂ.28ಕ್ಕೆ: ಸಚಿವ ಸುಧಾಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

UPSC ಪರೀಕ್ಷೆ ಫಲಿತಾಂಶ ಪ್ರಕಟ: ಅನುಜ್​ ಅಗ್ನಿಹೋತ್ರಿ ದೇಶಕ್ಕೇ ನಂ.1

ನವದೆಹಲಿ,ಮಾರ್ಚ್,6,2026 (www.justkannada.in): ಕೇಂದ್ರ ಲೋಕಸೇವಾ ಸೇವಾ ಆಯೋಗದ (ಯುಪಿಎಸ್​ಸಿ) 2025ನೇ ಸಾಲಿನ ಪರೀಕ್ಷಾ...

ರಾಜ್ಯ ಬಜೆಟ್ ಎಲ್ಲಾ ವರ್ಗಗಳಿಗೆ ನೆರವು ಒದಗಿಸುವ ಮಹತ್ವದ ಯೋಜನೆ ಘೊಷಿಸಿದ್ದಾರೆ- ಎಚ್.ಎ. ವೆಂಕಟೇಶ್

ಬೆಂಗಳೂರು,ಮಾರ್ಚ್,6,2026 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ ಬಜೆಟ್‌ ನಲ್ಲಿ...

JSS ವಿದ್ಯಾಸಂಸ್ಥೆಯಿಂದ ಅನ್ನದಾನ, ವಿದ್ಯಾದಾನ, ಉದ್ಯೋಗ ದಾನದ ಗ್ಯಾರಂಟಿ – ಲಾಗೈಡ್ ವೆಂಕಟೇಶ್

ಮೈಸೂರು,ಮಾರ್ಚ್,6,2026 (www.justkannada.in): ಈಗ ಎಲ್ಲೆಡೆ ಗ್ಯಾರಂಟಿಗಳು ಸದ್ದು ಮಾಡುತ್ತಿದ್ದು ಮೈಸೂರಿನ ಜೆಎಸ್ಎಸ್...

ರಾಜ್ಯಕ್ಕೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ಅಸಹಕಾರ ಮತ್ತು ಮಲತಾಯಿ ಧೋರಣೆ ತೋರುತ್ತಿದೆ

  ಬೆಂಗಳೂರು, ಮಾರ್ಚ್ 6:  2026-27 ನೇ ಆಯವ್ಯಯದಲ್ಲಿ  ರಾಜ್ಯದ ಜನರ ಭರವಸೆಗಳನ್ನು...