ದಾವಣಗೆರೆ,ಫೆಬ್ರವರಿ,7,2026 (www.justkannada.in): ರಾಜ್ಯದಲ್ಲಿ ಇದೀಗ ಅಧಿಕಾರ ಹಂಚಿಕೆ, ಕುರ್ಚಿ ವಿಚಾರದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು ಸಿದ್ದರಾಮಯ್ಯ 5 ವರ್ಷ ಸಿಎಂ ಎಂಬ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಕೆಲ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಮಾತನಾಡಿರುವ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ, ಅಧಿಕಾರ ಹಂಚಿಕೆ ಒಪ್ಪಂದ ಬಗ್ಗೆ ನನಗೆ ಮಾಹಿತಿ ಲಭ್ಯವಾಗಿದೆ. ಡಿಕೆ ಶಿವಕುಮಾರ್ ಗೆ 139 ಶಾಸಕರ ಬೆಂಬಲವಿದೆ. 40 ರಿಂದ 50 ಯುವ ಶಾಸಕರು ಡಿಕೆ ಶಿವಕುಮಾರ್ ಬೆಂಬಲಕ್ಕೆ ನಿಂತಿದ್ದೇವೆ ಎಂದಿದ್ದಾರೆ.
ಅಲ್ಲದೇ ಡಿಕೆ ಶಿವಕುಮಾರ್ ಏನೇ ಹೇಳಿದರೂ ಮಾಡಲು ರೆಡಿ ಇದ್ದೇವೆ. ಡಿಕೆಶಿಗೆ ಪ್ರಾಣ ಬೇಕಾದರೂ ಕೊಡುತ್ತೇವೆ ಎಂದು ಶಾಸಕ ಬಸವರಾಜ್ ಶಿವಗಂಗಾ ತಿಳಿಸಿದ್ದಾರೆ.
Key words: Young MLAs, support, DK Shivakumar, Congress MLA
The post ಯುವ ಶಾಸಕರು ಡಿಕೆಶಿ ಬೆಂಬಲಕ್ಕೆ ನಿಂತಿದ್ದೇವೆ: ಪ್ರಾಣ ಬೇಕಾದ್ರೂ ಕೊಡ್ತೇವೆ- ಕಾಂಗ್ರೆಸ್ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




