22
May, 2026

A News 365Times Venture

22
Friday
May, 2026

A News 365Times Venture

ರಾಜ್ಯದ 4 ಸ್ಥಾನ ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

Date:

ನವದೆಹಲಿ, ಮೇ, 22,2026 (www.justkannada.in):  ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ದಿನಾಂಕ ಘೋಷಣೆ ಮಾಡಿದೆ.

ಜೂನ್‌ 18 ರಿಂದ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ.  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು ತೆರವಾಗಲಿವೆ.

ಆಂಧ್ರಪ್ರದೇಶ, ಗುಜರಾತ್‌ ಮತ್ತು ಕರ್ನಾಟಕದಲ್ಲಿ ತಲಾ ನಾಲ್ಕು ಸ್ಥಾನಗಳು, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ ಮೂರು ಸ್ಥಾನಗಳು, ಜಾರ್ಖಂಡ್‌ನಲ್ಲಿ ಎರಡು ಸ್ಥಾನಗಳು ಮತ್ತು ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂನಲ್ಲಿ ತಲಾ ಒಂದು ಸ್ಥಾನಕ್ಕೆ ರಾಜ್ಯಸಭಾ ಚುನಾವಣೆ ನಡೆಯಲಿದೆ.

ಚುನಾವಣೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಜೂನ್ 1 ರಂದು ಹೊರಡಿಸಲಾಗುವುದು. ಜೂನ್ 1 ರಿಂದ 8 ರವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಜೂನ್ 9 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಜೂನ್ 11 ರವರೆಗೆ ಸಮಯವಿರುತ್ತದೆ. ರಾಜ್ಯದಲ್ಲಿ ಜೂನ್ 18 ರಂದು ಮತದಾನ ನಡೆಯಲಿದೆ. ಅಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ. ಅದೇ ದಿನ ಮತ ಎಣಿಕೆಯೂ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Key words: Elections, announced, Rajya Sabha, 24 seats

The post ರಾಜ್ಯದ 4 ಸ್ಥಾನ ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ ಹಾಸಿಗೆ-ಕೆ.ವಿ.ಪ್ರಭಾಕರ್

ಬೆಂಗಳೂರು,ಮೇ,22,2026 (www.justkannada.in): ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ...

‘ಲಾ ಗೈಡ್‌’ ವತಿಯಿಂದ ವಿದ್ಯಾರ್ಥಿಗಳ ದತ್ತಿ ಪ್ರಶಸ್ತಿಗಾಗಿ 1 ಲಕ್ಷ ರೂ. ಕೊಡುಗೆ

ಮೈಸೂರು,ಮೇ,22,2026 (www.justkannada.in): ಪ್ರೊ ಸಿ.ಕೆ.ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ...

ರಾಜ್ಯದಲ್ಲಿ SIR ಪ್ರಕ್ರಿಯೆ: ಮತದಾರರ ಹಕ್ಕು ತಡೆಯಲು ಸಂಚು- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮೇ,22,2026 (www.justkannada.in):  ರಾಜ್ಯದಲ್ಲಿ ಜೂನ್ 30ರಿಂದ ಎಸ್ ಐಆರ್ ಪ್ರಕ್ರಿಯೆ ನಡೆಯಲಿದ್ದು...

MDA ಮಧ್ಯವರ್ತಿಗಳ ಅಡ್ಡ: RTI ಕಾರ್ಯಕರ್ತರು–ಸಿಬ್ಬಂದಿ ಶಾಮೀಲು ಆರೋಪಕ್ಕೆ ಗಂಗರಾಜು ಪ್ರಕರಣವೇ ಸಾಕ್ಷಿಯೇ.?

  ಮೈಸೂರು, ಮೇ.೨೨,೨೦೨೬ : ಮೈಸೂರು ಅಭಿವೃದ್ಧಿ ಪ್ರಾಧಿಕಾರ ( Mysore  Development...