ಬೆಂಗಳೂರು,ಜೂನ್,9,2026 (www.justkannada.in): ಕರ್ನಾಟಕದಿಂದ ತೆರವಾಗಿದ್ದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಸಲ್ಲಿಕೆಯಾಗಿರುವ ನಾಲ್ಕು ನಾಮಪತ್ರಗಳು ಕ್ರಮಬದ್ಧವಾಗಿದ್ದು, ಯಾವುದೇ ಹೆಚ್ಚುವರಿ ಅಭ್ಯರ್ಥಿಗಳು ಕಣದಲ್ಲಿ ಇಲ್ಲದ ಕಾರಣ ನಾಲ್ಕು ಮಂದಿ ಅವಿರೋಧವಾಗಿ ಆಯ್ಕೆಯಾಗುವುದು ನಿಶ್ಚಿತವಾಗಿದೆ.
ವಿಧಾನಸೌಧದಲ್ಲಿ ಚುನಾವಣಾ ಅಧಿಕಾರಿ ಕೆ. ಎಂ. ವಿಶಾಲಾಕ್ಷಿ ಅವರು ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳ ಪರಿಶೀಲನೆ ನಡೆಸಿದರು. ಪರಿಶೀಲನೆಯ ನಂತರ ಎಲ್ಲಾ ನಾಲ್ಕೂ ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಧೃಡೀಕರಿಸಿ, ಅವುಗಳನ್ನು ಅಧಿಕೃತವಾಗಿ ಅಂಗೀಕರಿಸಿದ್ದಾರೆ.
ಸಂಖ್ಯಾಬಲದ ಆಧಾರದ ಮೇಲೆ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ಕಾಂಗ್ರೆಸ್ ಪಕ್ಷದಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್ ಹಾಗೂ ಪವನ್ ಖೇರಾ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ನಾಗರಾಜು ಅವರು ನಾಮಪತ್ರ ಸಲ್ಲಿಕೆ ಮಾಡಿದ್ದರು. ನಾಮಪತ್ರಗಳನ್ನು ಹಿಂಪಡೆಯಲು ಜೂನ್ 11 ಕೊನೆಯ ದಿನವಾಗಿದೆ.
Key words: Rajya Sabha, elections, Nominations, election
The post ರಾಜ್ಯಸಭಾ ಚುನಾವಣೆ: ನಾಮಪತ್ರಗಳು ಕ್ರಮಬದ್ಧ, ಅವಿರೋಧ ಆಯ್ಕೆ ನಿಶ್ಚಿತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




