12
March, 2026

A News 365Times Venture

12
Thursday
March, 2026

A News 365Times Venture

ರಾಜ್ಯ ರಾಜಕಾರಣದಲ್ಲಿ ಯಾವುದೇ ಕ್ರಾಂತಿ ಇಲ್ಲ, ಎಲ್ಲವೂ ಶಾಂತಿ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಮೈಸೂರು,ಜುಲೈ,11,2025 (www.justkannada.in):  ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ಬಳಿಕ ಯಾವುದೇ ಕ್ರಾಂತಿ ಇರುವುದಿಲ್ಲ. ಎಲ್ಲವೂ ಶಾಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಮೂರನೇ ಆಷಾಢ ಶುಕ್ರವಾರದ ಅಂಗವಾಗಿ  ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,  ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿದ ಮೇಲೆ ಬೇರೆ ರೀತಿಯ ಚರ್ಚೆಗೆ ಅವಕಾಶವೇ ಇಲ್ಲ. ಈ ಬಗ್ಗೆ ಪದೆ ಪದೇ ಮಾತನಾಡುವುದು ಸರಿ ಇಲ್ಲ ಎಂದರು.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಮಾತನಾಡಿದ್ದು, ಈ ಬಗ್ಗೆ ಮಾತನಾಡುವಷ್ಟು ದೊಡ್ಡವರು ನಾವಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಸಕಾಲಕ್ಕೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ

ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಯೋಜನೆಯ ಹಣ ಕೊಡಲಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನಾವು ಪ್ರತಿ ತಿಂಗಳು ಹಣ ಹಾಕುತ್ತಿದ್ದೇವೆ. ಮೇ ತಿಂಗಳವರೆಗೂ  ಹಣ ಹಾಕಲಾಗಿದೆ. ಜೂನ್ ತಿಂಗಳ ಹಣದ ಪ್ರಕ್ರಿಯೆ ನಡೆಯುತ್ತಿದೆ. ನಮಗೆ ಹಣ ಹಾಕಲು ಯಾವ ತೊಡಕುಗಳೂ ಇಲ್ಲ. ಎಚ್.ಎಂ ರೇವಣ್ಣ ಯಾಕೆ ಆ ರೀತಿ ಹೇಳಿದ್ದಾರೆ ಗೊತ್ತಿಲ್ಲ ಎಂದರು.vtu

Key words: Chamundi Hills, Minister, Lakshmi Hebbalkar, no revolution

The post ರಾಜ್ಯ ರಾಜಕಾರಣದಲ್ಲಿ ಯಾವುದೇ ಕ್ರಾಂತಿ ಇಲ್ಲ, ಎಲ್ಲವೂ ಶಾಂತಿ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ದೇಶದಲ್ಲಿ...

ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು

ಬೆಂಗಳೂರು,ಮಾರ್ಚ್,12,2026 (www.justkannada.in):  ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು ಒಳ...

ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಭಾರತದ ಮೇಲೆ ಪರಿಣಾಮ ಬೀರಿದ್ದು ದೇಶದ...

ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,11,2026 (www.justkannada.in): ಯುದ್ದದಿಂದಾಗಿ ಹಡಗು ಸಂಚಾರ ನಿಲ್ಲಿಸಿದ್ದಾರೆ. ಹೀಗಾಗಿ ಸಿಲಿಂಡರ್ ಪೂರೈಕೆಯಲ್ಲಿ...