ಬೆಂಗಳೂರು, ಏಪ್ರಿಲ್, 8,2025 (www.justkannada.in): ರಾಷ್ಟ್ರಪತಿ ಭವನ ಮತ್ತು ಸಂಸತ್ ಭವನದ ಮಾದರಿಯಲ್ಲಿ ವಿಧಾನಸೌಧದಲ್ಲಿ ಟೂರ್ ಗೈಡ್ ವ್ಯವಸ್ಥೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ವೀಕ್ಷಣೆಗೆ ಪ್ರವಾಸಿಗರಿಂದ ಶುಲ್ಕ ವಸೂಲಿಗೆ ಮುಂದಾಗಿದೆ.
ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಧಾನಸೌಧ ವೀಕ್ಷಣೆಗೆ ಟೂರ್ ಗೈಡ್ ಏರ್ಪಡಿಸಲಾಗಿದ್ದು, ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಟೂರ್ ಗೈಡ್ ವ್ಯವಸ್ಥೆ ಇರುತ್ತದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರವಾಸಿಗರು ಶುಲ್ಕ ಪಾವತಿಸಿ ವಿಧಾನಸೌಧ ವೀಕ್ಷಣೆ ಮಾಡಬಹುದಾಗಿದೆ.
ವಿಧಾನಸೌಧ ಕಟ್ಟಡಕ್ಕೆ ಪ್ರಸ್ತುತ ಶಾಶ್ವತ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗಿದೆ. ಇದರಿಂದ, ಕಟ್ಟಡದ ಸೌಂದರ್ಯವು ಹೆಚ್ಚಾಗಿದ್ದು, ಪ್ರವಾಸಿಗರು ವಿಧಾನಸೌಧವನ್ನು ವೀಕ್ಷಿಸಲು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ವಿಧಾನಸೌಧ ಕಟ್ಟಡ ವೀಕ್ಷಿಸಲು “Guided Tour” ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ವಿದೇಶಿ ಮತ್ತು ದೇಶಿಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ.
Key words: Tour guide, system, Vidhana Soudha
The post ರಾಷ್ಟ್ರಪತಿ-ಸಂಸತ್ ಭವನ ಮಾದರಿಯಲ್ಲೇ ವಿಧಾನಸೌಧದಲ್ಲಿ ಟೂರ್ ಗೈಡ್ ವ್ಯವಸ್ಥೆ: ವೀಕ್ಷಣೆಗೆ ಶುಲ್ಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.