ಬೆಳಗಾವಿ, ಆಗಸ್ಟ್,9,2025 (www.justkannada.in): ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ಎಂದು ರಾಹುಲ್ ಗಾಂಧಿ ಆರೋಪಿಸಿರುವುದರಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಕಿಡಿಕಾರಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್, ಅಧಿವೇಶನ ನಡೆಸಲು ಕಾಂಗ್ರೆಸ್ ನವರು ಬಿಡುತ್ತಿಲ್ಲ. ಸಂಸತ್ ನಲ್ಲಿ ಪ್ರಸ್ತಾಪಿಸುವ ವಿಚಾರವನ್ನು ಬೀದಿಯಲ್ಲಿ ಹೇಳುತ್ತಿದ್ದಾರೆ. ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ಎಂದಿದ್ದಾರೆ. ರಾಹುಲ್ ಗಾಂಧಿಗೆ ಸಾಮಾನ್ಯ ಜ್ಞಾನವೂ ಇಲ್ಲ ರಾಹುಲ್ ನಡವಳಿಕೆ ನೋಡಿದರೆ ಅಪ್ರಬುದ್ದನಂತೆ ಕಾಣುತ್ತದೆ ಎಂದು ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿ ಕೋರ್ಟ್ ಗೆ ಹೋಗಬೇಕಿತ್ತು. ಕೋರ್ಟ್ ಗೆ ಹೋದರೆ ಜಯ ಸಿಗಲ್ಲ ಎನ್ನುವುದು ಗೊತ್ತಿದೆ ಈ ಬಗ್ಗೆ ಚುನಾವಣಾ ಆಯೋಗ ದಾಖಲೆ ಕೇಳಿದರೆ ಕೊಟ್ಟಿಲ್ಲ. ವಿಪಕ್ಷ ನಾಯಕ ರಾಹುಲ್ ಮಾಡುತ್ತಿರುವುದು ಹುಚ್ಚಾಟ. ರಾಹುಲ್ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.
Key words: Illegal voting, Rahul Gandhi, allegations, MP Jagadish Shettar
The post ರಾಹುಲ್ ಗಾಂಧಿ ಆರೋಪದಲ್ಲಿ ಯಾವುದೇ ಹುರುಳಿಲ್ಲ- ಸಂಸದ ಜಗದೀಶ್ ಶೆಟ್ಟರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.