15
July, 2025

A News 365Times Venture

15
Tuesday
July, 2025

A News 365Times Venture

ರೈತರ ಜಮೀನು ಭೂ ಸ್ವಾಧೀನ ಕೈ ಬಿಟ್ಟ ಸರಕಾರ: ಸಿಎಂ ಘೋಷಣೆ.

Date:

ಬೆಂಗಳೂರು,ಜುಲೈ,15,2025 (www.justkannada.in): ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರವು  ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನ ಕೈಬಿಡಲು  ತೀರ್ಮಾನಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ.  ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು. ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ ಎಂದು ತಿಳಿಸಿದರು.

ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನ ಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ.

ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಆದರೆ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಹೆಚ್ಚಿನ ವಿಸ್ತೀರ್ಣದ ಅಭಿವೃದ್ಧಿಪಡಿಸಿದ ನಿವೇಶನ ನೀಡಲಾಗುವುದು.

1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸರ್ಕಾರ ಸ್ವಾಧೀನಪಡಿಸಿ, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು. ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ. ಯಾವುದೇ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು  ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಮುಖ್ಯಮಂತ್ರಿ ಅವರ ಸಾಮಾಜಿಕ ನ್ಯಾಯ ಕೇವಲ ನುಡಿಯಲ್ಲಿ ಮಾತ್ರವಲ್ಲ ನಡೆಯಲ್ಲೂ ಅದನ್ನು ಇಂದು ಅವರು ತೋರಿಸಿಕೊಟ್ಟಿದ್ದಾರೆ ಎಂದು ನಟ ಪ್ರಕಾಶ್ ರಾಜ್ ಅವರು ಹೇಳಿದರು.

ಸಭೆಯಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಹೆಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ,  ಅಡ್ವಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರೈತ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.vtu

Key words: government, abandoned, farmers.  Land acquisition, CM Siddaramaiah

The post ರೈತರ ಜಮೀನು ಭೂ ಸ್ವಾಧೀನ ಕೈ ಬಿಟ್ಟ ಸರಕಾರ: ಸಿಎಂ ಘೋಷಣೆ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು, ಜುಲೈ,15,2025 (www.justkannada.in): 2025-26ನೇ ಸಾಲಿಗೆ ಡಿ. ದೇವರಾಜ ಅರಸು ಹಿಂದುಳಿದ...

ಬಾಹ್ಯಾಕಾಶ ಯಾತ್ರೆ ಯಶಸ್ವಿ: ಭಾರತದಿಂದ ಈ ದಿನ ಹೊಸ ಮೈಲಿಗಲ್ಲು- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,15,2025 (www.justkannada.in): ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ...

ಪ್ರವಾಸಿಗರನ್ನು ಅತಿಥಿಗಳೆಂದು ಗೌರವಿಸಿ ಉತ್ತಮ ಸೇವೆ ನೀಡಿ :  ಡಾ.ಪಿ.ಶಿವರಾಜು ನಿರ್ದೇಶನ

ಮೈಸೂರು,ಜುಲೈ,15,2025 (www.justkannada.in):  ಮೈಸೂರು ದಸರಾ ಹಿನ್ನೆಲೆಯಲ್ಲಿ ಬರುವ ಪ್ರವಾಸಿಗರನ್ನು ಅತಿಥಿಗಳೆಂದು ಗೌರವಿಸಿ...

ಮೈಸೂರಿಗೆ ಭೇಟಿ: ವಿಶೇಷ ಮಕ್ಕಳೊಂದಿಗೆ ಸಂತಸದ ಕ್ಷಣ ಹಂಚಿಕೊಂಡ ಬಾಲಿವುಡ್ ನಟ

ಮೈಸೂರು,ಜುಲೈ,15,2025 (www.justkannada.in): ಬಾಲಿವುಡ್ ನಟ ಗುರುಪಾಲ್ ಸಿಂಗ್ ಅವರು ಇಂದು ಅಣುವ್ರತ...