20
August, 2026

A News 365Times Venture

20
Thursday
August, 2026

A News 365Times Venture

ವಿದ್ಯಾರ್ಥಿಗಳಿಂದಲೇ ಶಾಲಾ ಪ್ರಿನ್ಸಿಪಾಲ್ ಹತ್ಯೆ

Date:

ನಲ್ಗೊಂಡ,ಆಗಸ್ಟ್,20,2026 (www.justkannada.in): ತಂದೆ ತಾಯಿ ಮತ್ತು ಶಿಕ್ಷಕರನ್ನ ದೇವರ ಸಮಾನ ಎಂದು ಹೇಳುತ್ತಾರೆ. ಆದರೆ ವಿದ್ಯಾರ್ಥಿಗಳೇ ಕ್ಷುಲ್ಲಕ ಕಾರಣಕ್ಕೆ ಶಾಲೆಯ ಪ್ರಾಂಶುಪಾಲರೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದಲ್ಲಿ ನಲ್ಗೊಂಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಪ್ರಿನ್ಸಿಪಾಲ್ ರೂಪಾರೆಡ್ಡಿ ಎಂಬುವವರೇ 10ನೇ ತರಗತಿ ವಿದ್ಯಾರ್ಥಿಗಳಿಂದ ಹತ್ಯೆಯಾದವರು.

ಶಾಲೆಯಲ್ಲಿ ಓರ್ವ ವಿದ್ಯಾರ್ಥಿ ಬ್ಯಾಗ್ ನಲ್ಲಿ ಮೊಬೈಲ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲೆ ರೂಪಾರೆಡ್ಡಿ ಅವರು ವಿದ್ಯಾರ್ಥಿಯನ್ನು ಹಾಸ್ಟೆಲ್ ನಿಂದ ಹೊರಹಾಕಿದ್ದರು. ಹೀಗಾಗಿ ಪ್ರಿನ್ಸಿಪಾಲ್ ಮೇಲೆ ವಿದ್ಯಾರ್ಥಿಗೆ  ದ್ವೇಷ ಉಂಟಾಗಿದೆ.

ಇದೇ ದ್ವೇಷದಲ್ಲಿ ಇಬ್ಬರು ವಿದ್ಯಾರ್ಥಿಗಳು ಪ್ರಿನ್ಸಿಪಾಲ್ ರೂಪಾರೆಡ್ಡಿ ಮನೆಗೆ ನುಗ್ಗಿ ಚಾಕುವಿನಿಂದ 27 ಬಾರಿ ಇರಿದು ಕೊಲೆ ಮಾಡಿದ್ದಾರೆ. ಬಳಿಕ ಮನೆಯಲ್ಲಿದ್ದ 2 ಲಕ್ಷ ರೂ. ಹಣವನ್ನ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

Key words: School principal, murdered, by, students

The post ವಿದ್ಯಾರ್ಥಿಗಳಿಂದಲೇ ಶಾಲಾ ಪ್ರಿನ್ಸಿಪಾಲ್ ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮುಡಾ ಹಗರಣ: ಎಲ್ಲಾ‌ ಸೈಟ್ ಗಳನ್ನ ರದ್ದು ಮಾಡಿ ದಿಟ್ಟತನ ತೋರಿಸಿ- ಸಾ.ರಾ ಮಹೇಶ್

ಮೈಸೂರು,ಆಗಸ್ಟ್,20,2026 (www.justkannada.in): ಮುಡಾ 50:50 ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ  ನಗರಾಭಿವೃದ್ಧಿ ಸಚಿವ...

ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡಿ: ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಮಹಾಬಲಿಪುರಂ, ಆಗಸ್ಟ್, 20,2026 (www.justkannada.in): “ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು...

KMF ಪಶು ಆಹಾರ ಕಲಬೆರಕೆ ಅವ್ಯವಹಾರ ಪ್ರಕರಣ: ನಾಲ್ವರು ಹಿರಿಯ ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು,ಆಗಸ್ಟ್,20,2026 (www.justkannada.in): ಕೆಎಂಎಫ್ ಪಶು ಆಹಾರ ಕಲಬೆರಕೆ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟು: ಬಿಜೆಪಿ ನಾಯಕರಿಂದ ಪ್ರತಿಭಟನೆ

ಬೆಂಗಳೂರು,ಆಗಸ್ಟ್,19,2026 (www.justkannada.in):  ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ...