ಬೆಂಗಳೂರು,ಜುಲೈ,31,2026 (www.justkannada.in): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಸೆಷನ್ಸ್ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನ ಅಮಾನತ್ತಿನಲ್ಲಿಟ್ಟು ಹೈಕೋರ್ಟ್ ಜಾಮೀನು ನೀಡಿದೆ. ಅಲ್ಲದೆ ವಿನಯ್ ಕುಲಕರ್ಣಿ ದೋಷಿ ಎಂಬ ತೀರ್ಪಿಗೂ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಹಾಗೆಯೇ ಜಾಮೀನಿಗೆ 5 ಲಕ್ಷ ಬಾಂಡ್ ಶ್ಯೂರಿಟಿ ಒದಗಿಸಲು ಆದೇಶಿಸಿದ್ದು ಕೋರ್ಟ್ ಅನುಮತಿ ಇಲ್ಲದೇ ದೇಶ ಬಿಟ್ಟು ಹೊಗುವಂತಿಲ್ಲ ಎಂದು ವಿನಯ್ ಕುಲಕರ್ಣಿಗೆ ಹೈಕೋರ್ಟ್ ಷರತ್ತು ವಿಧಿಸಿದೆ. ಜಾಮೀನು ಮಂಜೂರು ಮೂಲಕ ವಿನಯ್ ಕುಲಕರ್ಣಿ ಶಾಸಕ ಸ್ಥಾನಕ್ಕೆ ಮತ್ತೆ ಜೀವ ಬಂದಿದೆ.
Key words: Vinay Kulkarni, Bail, granted, High Court
The post ವಿನಯ್ ಕುಲಕರ್ಣೀಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ಜಾಮೀನು ಮಂಜೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




