ನವದೆಹಲಿ,ಜೂನ್,14,2025 (www.justkannada.in): ಗುಜರಾತ್ ನ ಅಹಮದಾಬಾದ್ ನ ಮೇಘಾಶಿ ನಗರದಲ್ಲಿ ನಡೆದ ವಿಮಾನ ಪತನ ದುರಂತ ಕುರಿತು ಉನ್ನತ ಮಟ್ಟದ ತನಿಖೆ ನಡೆಯಲಿದ್ದು 3 ತಿಂಗಳಲ್ಲಿ ವರದಿ ಬರಲಿದೆ ಎಂದು ಕೇಂದ್ರ ವಿಮಾನಯಾನ ಇಲಾಖೆ ಸಚಿವ ರಾಮ್ ಮೋಹನ್ ನಾಯ್ಡು ತಿಳಿಸಿದ್ದಾರೆ.
ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸ ಮಾಹಿತಿ ನೀಡಿದ ಕೇಂದ್ರ ವಿಮಾನಯಾನ ಇಲಾಖೆ ಸಚಿವ ರಾಮ್ ಮೋಹನ್ ನಾಯ್ಡು, ಡ್ರೀಮ್ ಲೈನರ್ ವಿಮಾನದಲ್ಲಿ ಭದ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಬೋಯಿಂಗ್ 787 ವಿಮಾನಗಳಲ್ಲಿ ಭದ್ರತೆ ಪರಿಶೀಲನೆ ನಡೆಸಲಾಗುತ್ತಿದೆ. ಕೇಂದ್ರ ಗೃಹ ಸಚಿವಾಲಯದ ಉಸ್ತುವಾರಿಯಲ್ಲಿ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ಎಐ ವಿಮಾನ ದುರಂತದ ಬಗ್ಗೆ ಮೂರು ತಿಂಗಳಲ್ಲಿ ವರದಿ ಬರಲಿದೆ. ಘಟನೆಯಲ್ಲಿ ಮೃತಪಟ್ಟವರ ಡಿಎನ್ ಎ ಪರೀಕ್ಷೆ ನಡೆಸಿ ಶವಗಳನ್ನ ಕುಟುಂಬಸ್ಥರಿಗೆ ನೀಡಲಾಗುತ್ತಿದೆ ಎಂದರು.
ಕಳೆದ 2 ದಿನದಿಂದ ಬಹಳ ಕಠಿಣ ಪರಿಸ್ಥಿತಿಯನ್ನ ಎದುರಿಸುತ್ತಿದ್ದೇವೆ. ರಸ್ತೆ ಅಪಘಾತದಲ್ಲೇ ನಾನು ತಂದೆಯನ್ನ ಕಳೆದುಕೊಂಡಿದ್ದೇನೆ. ತಮ್ಮವರನ್ನ ಕಳೆದುಕೊಂಡ ನೋವನ್ನ ನಾನೂ ಅನುಭವಿಸಿದ್ದೇನೆ. ರಕ್ಷಣಾ ತಂಡಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಕೆಲಸ ನಡೆಸಿವೆ ದುರಂತ ಸಂಭವಿಸಿದ ಸ್ಥಳದಲ್ಲಿ ಈಗಾಗಲೇ ತನಿಖೆ ಆರಂಭವಾಗಿದೆ. ತಾಂತ್ರಿಕ ಸಮಿತಿಯ ತನಿಖೆ ನಂತರ ನಿಖರ ಕಾರಣ ತಿಳಿದು ಬರಲಿದೆ ಎಂದು ರಾಮ್ ಮೋಹನ್ ನಾಯ್ಡು ತಿಳಿಸಿದರು.
Key words: plane, crash, Ahmedabad, investigation, report, Union Minister, Ram Mohan Naidu
The post ವಿಮಾನ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆ, 3 ತಿಂಗಳಲ್ಲಿ ವರದಿ-ಕೇಂದ್ರ ಸಚಿವ ರಾಮ್ ಮೋಹನ್ ನಾಯ್ಡು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.