10
March, 2026

A News 365Times Venture

10
Tuesday
March, 2026

A News 365Times Venture

ವಿ.ಸಿ ನಾಲೆಯಲ್ಲಿ ದುರಂತ: ಕಾರಿನೊಳಗೆ ತಂದೆ ಇಬ್ಬರು ಮಕ್ಕಳು ಶವವಾಗಿ ಪತ್ತೆ

Date:

ಮಂಡ್ಯ,ಏಪ್ರಿಲ್,29,2025 (www.justkannada.in):  ಮಂಡ್ಯ ಜಿಲ್ಲೆಯ ವಿಸಿ ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು  ನಾಲೆಯಲ್ಲಿ ಉರುಳಿದ್ದ ಕಾರಿನಲ್ಲಿ ಮೂವರ ಶವ ಪತ್ತೆಯಾಗಿದೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆಯ ನಾರ್ತ್ ಬ್ಯಾಂಕ್ ಗ್ರಾಮದ ಸಮೀಪ ವಿಶ್ವೇಶ್ವರಯ್ಯ ನಾಲೆಯಲ್ಲಿ ಕಾರು ಬಿದ್ದಿದ್ದು ಕಾರಿನಲ್ಲಿ ತಂದೆ ಇಬ್ಬರ ಮಕ್ಕಳ ಮೃತದೇಹ ಪತ್ತೆಯಾಗಿದೆ.

ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲ್ಲೂಕು ಹೆಬ್ಬಾಳು ಗ್ರಾಮದ ಕುಮಾರಸ್ವಾಮಿ (38), ಅವರ ಮಕ್ಕಳಾದ ಅದ್ವೈತ್ (8) ಮತ್ತು ಅಕ್ಷತಾ (3) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಕುಮಾರಸ್ವಾಮಿ ಏ‌ಪ್ರಿಲ್  16ರಂದು ಮಕ್ಕಳ ಜತೆ ತಮ್ಮ ಕಾರಿನಲ್ಲಿ ಬೆಂಗಳೂರಿನಿಂದ ಕೆ. ಆರ್. ನಗರಕ್ಕೆ ತೆರಳುತ್ತಿದ್ದರು. ಬಳಿಕ ಅವರ ಸುಳಿವು ಸಿಕ್ಕಿರಲಿಲ್ಲ. ನಂತರ ಏಪ್ರಿಲ್ 19ರಂದು ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಇದೀಗ ವಿಸಿ ನಾಲೆಯಲ್ಲಿ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದು,  ಕಾರು ಮತ್ತು ಮೃತದೇಹಗಳನ್ನು ನಾಲೆಯಿಂದ ಮೇಲೆ ಎತ್ತಲಾಗಿದೆ.  ಸ್ಥಳಕ್ಕೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಕೆ.ಆರ್.ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Mandya, Father, two sons, dead, car, VC canal

The post ವಿ.ಸಿ ನಾಲೆಯಲ್ಲಿ ದುರಂತ: ಕಾರಿನೊಳಗೆ ತಂದೆ ಇಬ್ಬರು ಮಕ್ಕಳು ಶವವಾಗಿ ಪತ್ತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ: ಸಭೆ ಮಾಡಿ ಅಂತಿಮ ನಿರ್ಧಾರ- ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ...

ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,10,2026 (www.justkannada.in):  ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಪರಿಸ್ಥಿತಿಯ ಬಿಸಿ ಭಾರತಕ್ಕೂ ತಟ್ಟಿದ್ದು...

ನಾಳೆ ಸರ್ಕಾರಿ ವೈದ್ಯರು ಸಿಬ್ಬಂದಿಗಳ ಮುಷ್ಕರ: ಸಂಧಾನ ಸಭೆಗೆ ಮುಂದಾದ ಸಿಎಂ

ಬೆಂಗಳೂರು,ಮಾರ್ಚ್,10,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ  ಆರೋಗ್ಯ ಇಲಾಖೆಯ...