ನವದೆಹಲಿ,ಫೆಬ್ರವರಿ,27,2026 (www.justkannada.in): ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಚುನಾವಣೆಯಲ್ಲಿ ಎಸ್.ಎನ್. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ಆಸ್ತಿ ಮಾಹಿತಿ ಮುಚ್ಚಿಟ್ಟು ಅವರು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಕೋರ್ಟ್ ಮೆಟ್ಟಿಲೇರಿದ್ದರು. ಇತ್ತೀಚೆಗೆ ಈ ಕುರಿತು ತೀರ್ಪು ಪ್ರಕಟಿಸಿದ್ದ ಹೈಕೋರ್ಟ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ತೀರ್ಪು ಪ್ರಕಟಿಸಿತ್ತು.
ಈ ತೀರ್ಪು ಪ್ರಶ್ನಿಸಿ ಸುಬ್ಬಾರೆಡ್ಡಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಆದಾಯ ಬಹಿರಂಗಪಡಿಸಿದರೆ ಸಾಕೇ, ವ್ಯವಹಾರವನ್ನೂ ಬಹಿರಂಗಪಡಿಸಬೇಕೇ ಎಂಬ ಬಗ್ಗೆ ವಿಚಾರಣೆ ಅಗತ್ಯವೆಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, 6 ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎದುರಾಳಿ ಅಭ್ಯರ್ಥಿಯಾಗಿದ್ದ ಸಿ.ಮುನಿರಾಜುಗೆ ಸೂಚನೆ ನೀಡಿದೆ. ಸೆಪ್ಟೆಂಬರ್ ತಿಂಗಳಿಗೆ ನ್ಯಾಯಾಲಯ ವಿಚಾರಣೆ ಮುಂದೂಡಿದ್ದು, ಈ ಮೂಲಕ ಎಸ್.ಎನ್. ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
Key words: Supreme Court, stays, verdict MLA Subbareddy, High court
The post ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ತೀರ್ಪಿಗೆ ಸುಪ್ರೀಂ ತಡೆಯಾಜ್ಞೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




