25
June, 2026

A News 365Times Venture

25
Thursday
June, 2026

A News 365Times Venture

ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ತೀರ್ಪಿಗೆ ಸುಪ್ರೀಂ ತಡೆಯಾಜ್ಞೆ

Date:

ನವದೆಹಲಿ,ಫೆಬ್ರವರಿ,27,2026 (www.justkannada.in): ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್​​ ತಡೆಯಾಜ್ಞೆ ನೀಡಿದೆ.

ಚುನಾವಣೆಯಲ್ಲಿ ಎಸ್‌.ಎನ್‌. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ಆಸ್ತಿ ಮಾಹಿತಿ ಮುಚ್ಚಿಟ್ಟು ಅವರು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಕೋರ್ಟ್ ಮೆಟ್ಟಿಲೇರಿದ್ದರು. ಇತ್ತೀಚೆಗೆ ಈ ಕುರಿತು ತೀರ್ಪು ಪ್ರಕಟಿಸಿದ್ದ ಹೈಕೋರ್ಟ್ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ತೀರ್ಪು ಪ್ರಕಟಿಸಿತ್ತು.

ಈ ತೀರ್ಪು ಪ್ರಶ್ನಿಸಿ ಸುಬ್ಬಾರೆಡ್ಡಿ  ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಆದಾಯ ಬಹಿರಂಗಪಡಿಸಿದರೆ ಸಾಕೇ, ವ್ಯವಹಾರವನ್ನೂ ಬಹಿರಂಗಪಡಿಸಬೇಕೇ ಎಂಬ ಬಗ್ಗೆ ವಿಚಾರಣೆ ಅಗತ್ಯವೆಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, 6 ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎದುರಾಳಿ ಅಭ್ಯರ್ಥಿಯಾಗಿದ್ದ  ಸಿ.ಮುನಿರಾಜುಗೆ ಸೂಚನೆ ನೀಡಿದೆ. ಸೆಪ್ಟೆಂಬರ್ ತಿಂಗಳಿಗೆ ನ್ಯಾಯಾಲಯ ವಿಚಾರಣೆ ಮುಂದೂಡಿದ್ದು, ಈ ಮೂಲಕ ಎಸ್.ಎನ್. ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

Key words: Supreme Court,  stays, verdict MLA Subbareddy, High court

The post ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ತೀರ್ಪಿಗೆ ಸುಪ್ರೀಂ ತಡೆಯಾಜ್ಞೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

BSNL ಮೈಸೂರು ವಲಯದಿಂದ ಉಚಿತ ಹೈ-ಸ್ಪೀಡ್ ಇಂಟರ್ನೆಟ್ ಮತ್ತು ಸ್ವಯಂ ಉದ್ಯೋಗ ಅಭಿಯಾನ

​ಮೈಸೂರು,ಜೂನ್,24,2026 (www.justkannada.in): ಗ್ರಾಮೀಣ ಭಾಗದ ಸಬಲೀಕರಣಕ್ಕಾಗಿ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯ...

ಹೊಸ ವಿದ್ಯುತ್ ಸಂಪರ್ಕಕ್ಕೆ OC ಪಡೆಯುವುದರಿಂದ ವಿನಾಯಿತಿ: ಸದುಪಯೋಗಕ್ಕೆ ಸೆಸ್ಕ್‌ ಮನವಿ

ಮೈಸೂರು, ಜೂನ್,24, 2026 (www.justkannada.in):  ಹೊಸದಾಗಿ ನಿರ್ಮಿಸಿರುವ ಮನೆಗಳಿಗೆ ಶಾಶ್ವತ ವಿದ್ಯುತ್...

ದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸು

ಬೆಂಗಳೂರುಜೂನ್,24,2026 (www.justkannada.in): ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಗೋಕರೆಬಚ್ಚೇನಹಳ್ಳಿ ಮತ್ತು ಹ್ಯಾಡಾಳ ಗ್ರಾಮದಲ್ಲಿ...

ಶಾಸಕ ಪ್ರದೀಪ್ ಈಶ್ವರ್ ಟ್ರಸ್ಟ್‌ಗೆ ನಿವೇಶನ ಹಂಚಿಕೆ: ಹೈಕೋರ್ಟ್ ಯಥಾಸ್ಥಿತಿ ಆದೇಶ

  ಬೆಂಗಳೂರು, ಜೂ.24: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸೇರಿದ ಪರಿಶ್ರಮ...