22
May, 2026

A News 365Times Venture

22
Friday
May, 2026

A News 365Times Venture

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರೆಸಲು ಸುಪ್ರೀಂ ಸೂಚನೆ

Date:

ಚಿಕ್ಕಮಗಳೂರು,ಮೇ,21,2026 (www.justkannada.in): ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಥಾಸ್ಥಿತಿ ಮುಂದುವರಿಸಲು ಸೂಚನೆ ನೀಡಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜು.23ಕ್ಕೆ ಮುಂದೂಡಿಕೆ ಮಾಡಿದೆ.

ಮೇ 2ರಂದು ನಡೆದ ಮರು ಮತ ಎಣಿಕೆ ವೇಳೆ ಅಂಚೆ ಮತಪತ್ರ ತಿರುಚಲಾಗಿದೆ ಎಂದು ಆರೋಪಿಸಿ, ಜತೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ ನ ಟಿ.ಡಿ.ರಾಜೇಗೌಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಮೇ 11ರಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮರು ಮತ ಎಣಿಕೆ ಪ್ರಕ್ರಿಯೆ ಮತ್ತು ಫಲಿತಾಂಶಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿತ್ತು. ಹಾಗೆಯೇ ಮರು ಎಣಿಕೆಗೆ ಸಂಬಂಧಿಸಿದ ಎಲ್ಲ ದಾಖಲೆ ಗಳನ್ನು ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.

ಇದೀಗ ಪ್ರಕರಣ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಯಥಾಸ್ಥಿತಿ ಮುಂದುವರಿಕೆಗೆ ಆದೇಶಿಸಿ ವಿಚಾರಣೆಯನ್ನು ಜುಲೈ23ಕ್ಕೆ ಮುಂದೂಡಿಕೆ ಮಾಡಿದೆ.

Key words: Sringeri, postal vote ,recount case, Supreme Court

The post ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರೆಸಲು ಸುಪ್ರೀಂ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ ಹಾಸಿಗೆ-ಕೆ.ವಿ.ಪ್ರಭಾಕರ್

ಬೆಂಗಳೂರು,ಮೇ,22,2026 (www.justkannada.in): ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಹೂವಿನ‌ ಹಾದಿ ಅಲ್ಲ, ಮುಳ್ಳಿನ...

‘ಲಾ ಗೈಡ್‌’ ವತಿಯಿಂದ ವಿದ್ಯಾರ್ಥಿಗಳ ದತ್ತಿ ಪ್ರಶಸ್ತಿಗಾಗಿ 1 ಲಕ್ಷ ರೂ. ಕೊಡುಗೆ

ಮೈಸೂರು,ಮೇ,22,2026 (www.justkannada.in): ಪ್ರೊ ಸಿ.ಕೆ.ಎನ್ ರಾಜಾ ಹಾಗೂ ಹಿರಿಯ ವಕೀಲರಾದ ದಿವಂಗತ...

ರಾಜ್ಯದಲ್ಲಿ SIR ಪ್ರಕ್ರಿಯೆ: ಮತದಾರರ ಹಕ್ಕು ತಡೆಯಲು ಸಂಚು- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮೇ,22,2026 (www.justkannada.in):  ರಾಜ್ಯದಲ್ಲಿ ಜೂನ್ 30ರಿಂದ ಎಸ್ ಐಆರ್ ಪ್ರಕ್ರಿಯೆ ನಡೆಯಲಿದ್ದು...

MDA ಮಧ್ಯವರ್ತಿಗಳ ಅಡ್ಡ: RTI ಕಾರ್ಯಕರ್ತರು–ಸಿಬ್ಬಂದಿ ಶಾಮೀಲು ಆರೋಪಕ್ಕೆ ಗಂಗರಾಜು ಪ್ರಕರಣವೇ ಸಾಕ್ಷಿಯೇ.?

  ಮೈಸೂರು, ಮೇ.೨೨,೨೦೨೬ : ಮೈಸೂರು ಅಭಿವೃದ್ಧಿ ಪ್ರಾಧಿಕಾರ ( Mysore  Development...