10
July, 2026

A News 365Times Venture

10
Friday
July, 2026

A News 365Times Venture

ಸರ್ಕಾರದ ಮಹತ್ವದ ನಿರ್ಧಾರ: ಸಮಗ್ರ ಶಿಕ್ಷಣ ಯೋಜನೆಯಡಿ 16,925 ಹುದ್ದೆಗಳ ಮುಂದುವರಿಕೆ

Date:

ಬೆಂಗಳೂರು ಜುಲೈ,10,2026 (www.justkannada.in):  ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಅಭಿವೃದ್ಧಿ ಮತ್ತು ಆಡಳಿತದ ಸುಗಮತೆಗಾಗಿ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. 2026–27ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ಮುಂದುವರಿಸಲು ಸರ್ಕಾರ ಅನುಮೋದನೆ ನೀಡಿದೆ.

ಈ ಕ್ರಮದಿಂದ ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಶಿಸ್ತಿನ ನಿರ್ವಹಣೆ, ಕಾರ್ಯಪದ್ಧತೆಯ ಸ್ಥಿರತೆ ಹಾಗೂ ವಿದ್ಯಾರ್ಥಿ ಕಲ್ಯಾಣ ಯೋಜನೆಗಳ ನಿರಂತರತೆ ಮುಂದುವರೆಯಲು ಸಹಕಾರಿಯಾಗಲಿದೆ.

ಸರ್ಕಾರದ ಆದೇಶ ಸಂಖ್ಯೆ ಇಎ 161 ಯೋಜನ 2026, ದಿನಾಂಕ 06.07.2026ರ ಪ್ರಕಾರ, ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ, ಬೆಂಗಳೂರು ಇವರ ಪ್ರಸ್ತಾವನೆಯಂತೆ ಒಟ್ಟು 16,925 ಹುದ್ದೆಗಳನ್ನು ಮುಂದುವರಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ರಾಜ್ಯ ಕಚೇರಿಯ 76 ಹುದ್ದೆಗಳು, ಜಿಲ್ಲಾ ಕಚೇರಿಯ 370 ಹುದ್ದೆಗಳು, ತಾಲೂಕು ಹಾಗೂ ವಲಯ ಕಚೇರಿಗಳ 15,105 ಹುದ್ದೆಗಳು ಸೇರಿವೆ. ಜೊತೆಗೆ ಡಿ.ಪಿ.ಇ.ಪಿ ಯೋಜನೆಯಡಿ 75 ತಾತ್ಕಾಲಿಕ ಗುತ್ತಿಗೆ ಹುದ್ದೆಗಳು ಹಾಗೂ 1,292 ಆಡಳಿತ ಹುದ್ದೆಗಳು ಮುಂದುವರಿಸಲ್ಪಟ್ಟಿವೆ.

ಈ ಹುದ್ದೆಗಳ ವಿಸ್ತರಣೆ ಮೂಲಕ ರಾಜ್ಯದ ಶಾಲಾ ಶಿಕ್ಷಣ ಇಲಾಖೆಯ ಕಾರ್ಯಪದ್ಧತಿ ಸುಗಮಗೊಳ್ಳಲಿದೆ. ಶಿಕ್ಷಕರು, ಆಡಳಿತಾಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಶಾಲಾ ಮಟ್ಟದ ಯೋಜನೆಗಳ ಅನುಷ್ಠಾನ ವೇಗ ಪಡೆಯಲಿದೆ. ಸರ್ಕಾರದ ಈ ಕ್ರಮದಿಂದ ಶಿಕ್ಷಣ ಕ್ಷೇತ್ರದಲ್ಲಿ ಸ್ಥಿರತೆ ಮತ್ತು ಪಾರದರ್ಶಕತೆ ಹೆಚ್ಚುವ ನಿರೀಕ್ಷೆ ವ್ಯಕ್ತವಾಗಿದೆ.

ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ, ಬೆಂಗಳೂರು ಇವರ ಮಾರ್ಗದರ್ಶನದಲ್ಲಿ ಈ ಹುದ್ದೆಗಳ ನಿರ್ವಹಣೆ ಮತ್ತು ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಸರ್ಕಾರದ ಆದೇಶದ ಪ್ರಕಾರ, ಎಲ್ಲಾ ಹುದ್ದೆಗಳ ವಿವರ ಹಾಗೂ ವರ್ಗೀಕರಣವನ್ನು ಅಧಿಕೃತ ದಾಖಲೆಗಳಲ್ಲಿ ಪ್ರಕಟಿಸಲಾಗಿದೆ.ಈ ಹುದ್ದೆಗಳ ವಿಸ್ತರಣೆ ಮೂಲಕ ರಾಜ್ಯದ ಶಾಲಾ ಶಿಕ್ಷಣ ಇಲಾಖೆಯ ಕಾರ್ಯಪದ್ಧತಿ ಸುಗಮಗೊಳ್ಳಲಿದೆ. ಶಿಕ್ಷಕರು, ಆಡಳಿತಾಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಶಾಲಾ ಮಟ್ಟದ ಯೋಜನೆಗಳ ಅನುಷ್ಠಾನ ವೇಗ ಪಡೆಯಲಿದೆ. ಸರ್ಕಾರದ ಈ ಕ್ರಮದಿಂದ ಶಿಕ್ಷಣ ಕ್ಷೇತ್ರದಲ್ಲಿ ಸ್ಥಿರತೆ ಮತ್ತು ಪಾರದರ್ಶಕತೆ ಹೆಚ್ಚುವ ನಿರೀಕ್ಷೆ ವ್ಯಕ್ತವಾಗಿದೆ.

ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ, ಬೆಂಗಳೂರು ಇವರ ಮಾರ್ಗದರ್ಶನದಲ್ಲಿ ಈ ಹುದ್ದೆಗಳ ನಿರ್ವಹಣೆ ಮತ್ತು ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಸರ್ಕಾರದ ಆದೇಶದ ಪ್ರಕಾರ, ಎಲ್ಲಾ ಹುದ್ದೆಗಳ ವಿವರ ಹಾಗೂ ವರ್ಗೀಕರಣವನ್ನು ಅಧಿಕೃತ ದಾಖಲೆಗಳಲ್ಲಿ ಪ್ರಕಟಿಸಲಾಗಿದೆ.

ಈ ನಿರ್ಧಾರದಿಂದ ರಾಜ್ಯದ ಶಿಕ್ಷಣ ವ್ಯವಸ್ಥೆಗೆ ಹೊಸ ಉತ್ಸಾಹ ಸಿಕ್ಕಿದ್ದು, ಶಾಲಾ ಶಿಕ್ಷಣ ಇಲಾಖೆಯ ಕಾರ್ಯಪದ್ಧತಿಯಲ್ಲಿ ಶಿಸ್ತಿನ ನಿರ್ವಹಣೆ ಮತ್ತು ವಿದ್ಯಾರ್ಥಿ ಕಲ್ಯಾಣ ಯೋಜನೆಗಳ ನಿರಂತರತೆ ಖಚಿತವಾಗಲಿದೆ. ಸಮಗ್ರ ಶಿಕ್ಷಣ ಯೋಜನೆಯಡಿ ಮುಂದುವರಿಸಲಾದ ಹುದ್ದೆಗಳು ರಾಜ್ಯದ ಶಿಕ್ಷಣ ಕ್ಷೇತ್ರದ ಬಲವರ್ಧನೆಗೆ ಪ್ರಮುಖ ಪಾತ್ರವಹಿಸಲಿವೆ.

Key words: government, Continuation, 16,925 posts, Comprehensive Education Scheme

The post ಸರ್ಕಾರದ ಮಹತ್ವದ ನಿರ್ಧಾರ: ಸಮಗ್ರ ಶಿಕ್ಷಣ ಯೋಜನೆಯಡಿ 16,925 ಹುದ್ದೆಗಳ ಮುಂದುವರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಐದೂ ಪಾಲಿಕೆ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಮುಂದುವರಿಕೆ- ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಜುಲೈ,10,2026 (www.justkannada.in): “ಜುಲೈ 1 ರಿಂದ ಇಲ್ಲಿಯವರೆಗು ಒಟ್ಟು 435...

ಅಕ್ರಮ ವಲಸಿಗರಿಗೆ ಶಾಶ್ವತ ಪ್ರಮಾಣ ಪತ್ರ ನೀಡಲು ಮುಂದಾಗಿದ್ದಾರೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು,ಜುಲೈ,10,2026 (www.justkannada.in): ರಾಜ್ಯ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ...

GBA ಚುನಾವಣೆಗೆ ಮತ್ತೆ ಸಮಯಾವಕಾಶ ಕೇಳಿದ ರಾಜ್ಯ ಸರ್ಕಾರ

ಬೆಂಗಳೂರು,ಜುಲೈ,10,2026 (www.justkannada.in): ಗ್ರೇಟರ್ ಬೆಂಗಳೂರು ಪ್ರಾಧಿಕಾರ(GBA) ದ ಚುನಾವಣೆ ನಡೆಸಲು ರಾಜ್ಯಸರ್ಕಾರ...

2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ: ಸಿಎಂ ಡಿ.ಕೆ ಶಿವಕುಮಾರ್

ಬೆಳಗಾವಿ, ಜುಲೈ, 10,2026 (www.justkannada.in): 2028 ಕ್ಕೆ ಕಾಂಗ್ರೆಸ್ ಸರ್ಕಾರ ಮತ್ತೆ...