15
May, 2026

A News 365Times Venture

15
Friday
May, 2026

A News 365Times Venture

ಸರ್ಕಾರದ ಯೋಜನೆಗಳಿಗೆ ಜನರ ಮೆಚ್ಚುಗೆ: ಜನಾಶೀರ್ವಾದದಿಂದ ಪಕ್ಷಕ್ಕೆ  ಗೆಲುವು-ಸಿಎಂ ಸಿದ್ದರಾಮಯ್ಯ

Date:

ಮೈಸೂರು, ಮೇ, 06,2026 (www.justkannada.in): ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದು, ಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉಪಚುನಾವಣೆ ಗೆಲುವು ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡಿರುವುದನ್ನು ಸೂಚಿಸುತ್ತದೆ. ವಿಪಕ್ಷಗಳ ಯಾವುದೇ ತಂತ್ರಗಾರಿಕೆ ನಡೆಯುವುದಿಲ್ಲ. ಅವರು ಕೇವಲ ಕುತಂತ್ರಗಳನ್ನಷ್ಟೇ ಮಾಡುತ್ತಾರೆ ಎಂದರು.

ಸಿಎಂ ಬದಲಾವಣೆ-ವರಿಷ್ಠರ ತೀರ್ಮಾನಕ್ಕೆ ಬದ್ಧ

ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು  ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ.  ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ವರಿಷ್ಠರ ಭೇಟಿಗೆ ಕರೆ ಬಂದರೆ ನವದೆಹಲಿಗೆ ತೆರಳುವುದಾಗಿ ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ

ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವ ಬಗ್ಗೆ ಉತ್ತರಿಸಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಧ್ಯದಲ್ಲಿಯೇ ನಡೆಸಲಾಗುವುದು ಎಂದರು.

ಶೃಂಗೇರಿ ಚುನಾವಣಾ ಫಲಿತಾಂಶ-ಬಿಜೆಪಿಯಿಂದ ಕ್ರಿಮಿನಲ್ ಸಂಚು

ಶೃಂಗೇರಿಯ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ, ಮತಎಣಿಕೆ ವಿಚಾರದಲ್ಲಿ ಬಿಜೆಪಿ ಕ್ರಿಮಿನಲ್ ಸಂಚು ನಡೆಸಿದೆ. ರಾಜೇಗೌಡರಿಗೆ ಬಿದ್ದಿದ್ದ 255 ಅರ್ಹವಾಗಿದ್ದ ಮತಗಳನ್ನು ಅನರ್ಹ ಮಾಡಲಾಗಿದೆ. ಮತ ಎಣಿಕೆಯಾಗುವಾಗ ಬಿಜೆಪಿ ಸರ್ಕಾರವಿತ್ತು. ಬಿಜೆಪಿಯವರು ಮತ್ತು ಸಿಬ್ಬಂದಿ ಮೂಲಕ ಮತಪತ್ರಗಳನ್ನು ತಿದ್ದಲಾಗಿದ್ದು, ಇದು ಕ್ರಿಮಿನಲ್ ಸಂಚು. ಆದ್ದರಿಂದ ಶೃಂಗೇರಿ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದರು.

ರೈಲ್ವೆ ಇಲಾಖೆಯ ಹುದ್ದೆಗಳಿಗೆ ಕನ್ನಡಿಗರನ್ನು ಪರಿಗಣಿಸಲಾಗುತ್ತಿಲ್ಲ, ರಾಜ್ಯಸರ್ಕಾರ ಇದರಲ್ಲಿ ಮಧ್ಯಪ್ರವೇಶಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಈ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ನಡೆಸುತ್ತಿದ್ದು, ಈ ನಡವಳಿಕೆಯು ಕನ್ನಡಿಗರ ಪರ ಅವರ ಧೋರಣೆಯನ್ನು ಬಿಂಬಿಸುತ್ತದೆ ಎಂದರು.

Key words: People, appreciation, government, CM Siddaramaiah

The post ಸರ್ಕಾರದ ಯೋಜನೆಗಳಿಗೆ ಜನರ ಮೆಚ್ಚುಗೆ: ಜನಾಶೀರ್ವಾದದಿಂದ ಪಕ್ಷಕ್ಕೆ  ಗೆಲುವು-ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

SIR ಮ್ಯಾಪಿಂಗ್: 13 ಕೋಟಿ ಜನರ ಹೆಸರು ಮತಪಟ್ಟಿಯಿಂದ ತೆಗೆಯಲಿದ್ದಾರೆ- ಸಚಿವ ಸಂತೋಷ್ ಲಾಡ್

ಬೆಂಗಳೂರು,ಮೇ,15,2026 (www.justkannada.in): ದೇಶದಲ್ಲಿ ಎಸ್ ಐಆರ್ ಮ್ಯಾಪಿಂಗ್ ಶುರುವಾಗಿದೆ 13 ಕೋಟಿ ಜನರ...

ನಟ ದರ್ಶನ್ ಗೆ ಒಂದು ವರ್ಷ ಜೈಲೇ ಗತಿ: ಸಾಕ್ಷ್ಯ ವಿಚಾರಣೆಗೆ ಕಾಲಾವಕಾಶ ನೀಡಿದ ಸುಪ್ರೀಂ

 ನವದೆಹಲಿ,ಮೇ,15,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ...

ಬಿಜೆಪಿ ಹಿಜಾಬ್ ವಿರೋಧಿ ಅಲ್ಲ, ಆದರೆ ಶಾಲೆಯಲ್ಲಿ ಸಮವಸ್ತ್ರ ಇರಲಿ- MLC ಸಿ.ಟಿ ರವಿ

ಬೆಂಗಳೂರು,ಮೇ,14,2026 (www.justkannada.in):  ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ವಿಚಾರ ಸಂಬಂಧ...

ಮೈಸೂರು ಮಹಾರಾಣಿ ಕಾಲೇಜು ಹಾಸ್ಟೆಲ್ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು,ಮೇ,14,2026 (www.justkannada.in): ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ...