27
April, 2026

A News 365Times Venture

27
Monday
April, 2026

A News 365Times Venture

ಸರ್ಕಾರಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ತೀವ್ರಗೊಂಡ ಹೋರಾಟ: ಬಿಜೆಪಿ ನಾಯಕರು ಸಾಥ್

Date:

ಧಾರವಾಡ,ಫೆಬ್ರವರಿ,24,2026 (www.justkannada.in): ರಾಜ್ಯದಲ್ಲಿ 2.80 ಲಕ್ಷ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿಗಳನ್ನ ಪ್ರಾರಂಭಿಸದೇ  ವಿಳಂಬ ಧೋರಣೆ ತಾಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಸಾವಿರಾರು ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದು ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ ವತಿಯಿಂದ ಧಾರವಾಡದಲ್ಲಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದ್ದು ಪ್ರತಿಭಟನೆಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ. ನಗರದ ಶ್ರೀನಗರ ವೃತ್ತದಿಂದ ಜುಬಿಲಿ ವೃತ್ತಕ್ಕೆ ಜಮಾಯಿಸಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳು ಕೂಡಲೇ ನೇಮಕಾತಿಗಳನ್ನ ಆರಂಭಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ದ  ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಅರವಿಂದ ಬೆಲ್ಲದ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪಾಲ್ಗೊಂಡಿದ್ದಾರೆ.  ಯುವಜನತೆ ಹೋರಾಟದ ಕಾವು ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದ್ದು ನೇಮಕಾತಿ ಆರಂಭಿಸುವವರೆಗೂ ಹೋರಾಟ ನಿಲ್ಲಲ್ಲ ಎಂದು ಸರ್ಕಾರಕ್ಕೆ ಖಡಕ್ ವಾರ್ನಿಂಗ್ ನೀಡಿದ್ದಾರೆ.   ಮಧ್ಯಾಹ್ನ ಊಟಕ್ಕೂ ತೆರಳದೆ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ನೀರು ಬಿಸ್ಕೆಟ್ ನೀಡುವ ಮೂಲಕ ಸ್ಥಳೀಯರೂ ಸಾಥ್ ನೀಡಿದ್ದಾರೆ ಎನ್ನಲಾಗಿದೆ

Key words: Protests,  demanding, filling ,government vacancies, Dharwad

The post ಸರ್ಕಾರಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ತೀವ್ರಗೊಂಡ ಹೋರಾಟ: ಬಿಜೆಪಿ ನಾಯಕರು ಸಾಥ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ಜೆಎಸ್ಎಸ್ ಕಾರ್ಪೊರೇಟ್ ಲಾ ಮೂಟ್ ಕೋರ್ಟ್ ಸ್ಪರ್ಧೆ ಯಶಸ್ವಿ

ಮೈಸೂರು,ಏಪ್ರಿಲ್,27,2026 (www.justkannada.in): ಜೆಎಸ್ಎಸ್ ಮಹಾವಿದ್ಯಾಪೀಠದ ಅಧೀನದಲ್ಲಿರುವ ಮೈಸೂರು ಕುವೆಂಪುನಗರದ ಜೆಎಸ್ಎಸ್ ಕಾನೂನು...

ಸಚಿವ ಸುಧಾಕರ್ ಗೆ ಏನಾಗಿದೆ? ಮಾಹಿತಿ ಏಕೆ ಮುಚ್ಚಿಡುತ್ತಿದ್ದೀರಿ? ಬಹಿರಂಗಪಡಿಸಿ- ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು,ಏಪ್ರಿಲ್,27,2026 (www.justkannada.in): ಸಚಿವ ಡಿ.ಸುಧಾಕರ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು...

ಹಠಾತ್ ಕುಸಿದು ಬಿದ್ದು ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಸಾವು

ಹಾಸನ, ಏಪ್ರಿಲ್,27,2026 (www.justkannada.in): ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ...

ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ ಸಿಗಬೇಕು- ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ,ಏಪ್ರಿಲ್,27,2026 (www.justkannada.in): ಸಚಿವ ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ  ಸಿಗಬೇಕು ಎಂದು...