25
August, 2026

A News 365Times Venture

25
Tuesday
August, 2026

A News 365Times Venture

ಸರ್ಕಾರಿ ಜಮೀನು ಕಬಳಿಸುವ ಭೂಗಳ್ಳರ ವಿರುದ್ದ ಕಠಿಣ ಕಾನೂನು ಕ್ರಮ- ಸಚಿವ ಕೃಷ್ಣಭೈರೇಗೌಡ

Date:

ಬೆಂಗಳೂರು, ಆಗಸ್ಟ್,13,2025 (www.justkannada.in):  ಸರ್ಕಾರಿ ಜಮೀನು ಕಬಳಿಸುವ ಭೂಗಳ್ಳರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಇಲಾಖೆ ಸಚಿವ  ಕೃಷ್ಣಭೈರೇಗೌಡ ತಿಳಿಸಿದರು.

ವಿಧಾನಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣಭೈರೇಗೌಡ, ಭೂಗಳ್ಳರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಲು ತಿದ್ದುಪಡಿ ಮಾಡಿರುವ ಕಾಯ್ದೆ ಈ ತಿಂಗಳ ಅಂತ್ಯದೊಳಗೆ ಜಾರಿಗೆ ಬರಲಿದೆ. ಇದುವರೆಗೂ ಸರ್ಕಾರಿ ಜಮೀನು ಕಬಳಿಸಿದವರು ಕಾನೂನಿನಿಂದ ತಪ್ಪಿಸಿಕೊಳ್ಳುತ್ತಿದ್ದರು. ನ್ಯಾಯಾಲಯದಿಂದ ತಡೆಯಾಜ್ಞೆ ತರುವುದು ಸೇರಿದಂತೆ ಹಲವು ದಾರಿಗಳಿಂದ ನುಣುಚಿಕೊಳ್ಳುತ್ತಿದ್ದರು. ನೂತನ ಕಾಯ್ದೆಯಲ್ಲಿ ಹಲವಾರು ಕಠಿಣ ಕಾನೂನು ಕ್ರಮಗಳನ್ನು ಸೇರ್ಪಡೆ ಮಾಡಿದ್ದೇವೆ ಎಂದರು.

ಹಾಗೆಯೇ ಯಾರೇ ಆಗಲಿ ಸರ್ಕಾರಿ ಜಮೀನು ಕಬಳಿಸಿರುವುದು ಅಥವಾ ಕಬಳಿಸುವವರಿಗೆ ಪ್ರತ್ಯಕ್ಷವಾಗಿ , ಪರೋಕ್ಷವಾಗಿ ಸಹಾಯ ಮಾಡುವ  ಅಧಿಕಾರಿಗಳ ವಿರುದ್ದವೂ ಕಾನೂನು ಕ್ರಮ ಕೈಗೊಳ್ಳಲು ಹೊಸ ಕಾನೂನಿನಲ್ಲಿ ಅವಕಾಶವಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

Key words: Strict, legal action, against, government land, acquisition

The post ಸರ್ಕಾರಿ ಜಮೀನು ಕಬಳಿಸುವ ಭೂಗಳ್ಳರ ವಿರುದ್ದ ಕಠಿಣ ಕಾನೂನು ಕ್ರಮ- ಸಚಿವ ಕೃಷ್ಣಭೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...