ಬೆಂಗಳೂರು,ಜುಲೈ,21,2026 (www.justkannada.in): ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಕಾನೂನಿನ ಗಂಭೀರ ಉಲ್ಲಂಘನೆಯಾಗಿದೆ. ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವ ಯಾರನ್ನೂ ಸಹ ಬಿಡುವುದಿಲ್ಲ ಬಂಧಿಸಲಾಗುವುದು ಎಂದು ಬೆಂಗಳೂರು ಅಭಿವೃದ್ದಿ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.
ಈ ಬಗ್ಗೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ. ಇವರು ಸಮಾಜಘಾತುಕ ಶಕ್ತಿಗಳು. ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿರುವ ಪ್ರತಿಯೊಬ್ಬರನ್ನೂ ಬಂಧಿಸುತ್ತೇವೆ ಈ ಬಗ್ಗೆ ಪೊಲೀಸ್ ಆಯುಕ್ತರು ಮತ್ತು ಜಿಬಿಎ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು.
ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಜಾರಿಗೊಳಿಸುವಾಗ ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಕಾನೂನಿನ ಗಂಭೀರ ಉಲ್ಲಂಘನೆಯಾಗಿದೆ. ಕಾನೂನಿನಂತೆ ಸಾರ್ವಜನಿಕ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಪರವಾಗಿ ನಾವು ದೃಢವಾಗಿ ನಿಲ್ಲುತ್ತೇವೆ. ಸಾರ್ವಜನಿಕ ಕರ್ತವ್ಯದಲ್ಲಿರುವ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವ ಯಾರನ್ನೂ ಸಹ ನಾವು ಬಿಡುವುದಿಲ್ಲ. ನಾವು ಒಟ್ಟಾಗಿ ಮಾದರಿಯಾಗುವಂತಹ ಕಠಿಣ ಕ್ರಮಗಳನ್ನು ಜರುಗಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
Key words: attacks, government, representatives, Minister, Krishna Bhairegowda
The post ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿದ ಯಾರನ್ನೂ ಸಹ ಬಿಡುವುದಿಲ್ಲ- ಸಚಿವ ಕೃಷ್ಣಭೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




